ಫ್ಲೆಕ್ಸ್ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಆರೋಪಿಗಳಿಗೆ ತಲಾ 10 ಸಾವಿರ ರೂ.ದಂಡ ವಿಧಿಸಿದ ಹೈಕೋರ್ಟ್

Update: 2018-08-29 15:42 GMT

ಬೆಂಗಳೂರು, ಆ.29: ಅಕ್ರಮ ಫ್ಲೆಕ್ಸ್ ತೆರವು ವೇಳೆ ಬಿಬಿಎಂಪಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ರದ್ದುಕೋರಿ ಇಬ್ಬರು ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಎಫ್‌ಐಆರ್, ಅಧೀನ ನ್ಯಾಯಾಲಯದಲ್ಲಿನ ವಿಚಾರಣೆ ರದ್ದುಕೋರಿ ಆರೋಪಿಗಳಾದ ಸಂತೋಷ್ ಹಾಗೂ ಸರವಣನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ. ಅರ್ಜಿದಾರರ ಪರ ವಾದಿಸಿದ ವಕೀಲರು, ಆರೋಪಿಗಳಾದ ಸಂತೋಷ್ ಹಾಗೂ ಸರವಣನ್ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣಾ ಸಮಯವನ್ನು ವಿಸ್ತರಿಸಬೇಕು ಹಾಗೂ ಬಿಬಿಎಂಪಿ ಅಧಿಕಾರಿಗಳ ವಿಚಾರಣೆ ನಡೆಸಬೇಕೆಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಆರೋಪಿಗಳಿಬ್ಬರಿಗೂ ತಲಾ 10 ಸಾವಿರ ರೂ.ದಂಡ ವಿಧಿಸಿತು. ಅಲ್ಲದೆ, ಈ ಹಣವನ್ನು ಕೊಡಗಿನ ಸಂತ್ರಸ್ಥರಿಗೆ ಪರಿಹಾರವಾಗಿ ನೀಡಲು ನಿರ್ದೇಶನ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News