ಕಾರವಾರ ಎಸ್ಪಿ ಆರೋಗ್ಯ ವಿಚಾರಿಸಿದ ಡಿಜಿಪಿ ನೀಲಮಣಿ ರಾಜು

Update: 2018-08-29 16:02 GMT

ಉಡುಪಿ, ಆ. 29: ಅನಾರೋಗ್ಯದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿರುವ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ವಿನಾಯಕ ಪಾಟೀಲ್ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲ ಮಣಿ ರಾಜು ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಆರೋಗ್ಯ ಸಮಸ್ಯೆಯಿಂದ ವಿನಾಯಕ ಪಾಟೀಲ್ ಆ.27ರಂದು ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು. ಮಂಗಳೂರಿಗೆ ಆಗಮಿಸಿದ್ದ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಈ ವಿಚಾರ ತಿಳಿದು ಮಣಿ ಪಾಲ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿನಾಯಕ ಪಾಟೀಲ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಇದೀಗ ಆರೋಗ್ಯವಾಗಿರುವ ಎಸ್ಪಿ ವಿನಾಯಕ ಪಾಟೀಲ್ ಅವರನ್ನು ನಾಳೆ ಸಾಮಾನ್ಯ ವಾರ್ಡ್‌ಗೆ ವರ್ಗಾಯಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಮಂಗಳೂರು ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಇದ್ದರು.

ಎಸ್ಪಿ ಕಚೇರಿ ಭೇಟಿ: ನಂತರ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಗೆ ಭೇಟಿ ನೀಡಿದ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು, ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಕುರಿತು ಐಜಿಪಿ, ಎಸ್ಪಿ ಅವರೊಂದಿಗೆ ಮಾಹಿತಿ ಪಡೆದುಕೊಂಡು ಚರ್ಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News