×
Ad

ಉಡುಪಿ: ಕನ್ನಡದಲ್ಲಿ ವಿಜ್ಞಾನ ಉಪನ್ಯಾಸ ಸ್ಪರ್ಧೆ

Update: 2018-08-29 22:27 IST

ಉಡುಪಿ, ಆ. 29: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಪದವಿ ವಿಜ್ಞಾನ ಕಾಲೇಜು ವಿದ್ಯಾರ್ಥಿಗಳಿಗೆ ಅಂತರ ವಿಶ್ವವಿದ್ಯಾಲಯ ಮಟ್ಟ ಮತ್ತು ರಾಜ್ಯ ಮಟ್ಟದಲ್ಲಿ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯನ್ನು ರಾಜ್ಯಾದ್ಯಂತ ಆಯೋಜಿಸಲಾಗುತ್ತಿದೆ.

ರಾಜ್ಯದ ಯಾವುದೇ ವಿಶ್ವವಿದ್ಯಾಲಯದಲ್ಲಿ ಮೂಲ ವಿಜ್ಞಾನವನ್ನು (ಭೌತ ಶಾಸ್ತ್ರ, ಜೀವಶಾಸ್ತ್ರ, ರಸಾಯನ ಶಾಸ್ತ್ರ ಹಾಗೂ ಗಣಿತ ವಿಷಯ) ವ್ಯಾಸಂಗ ಮಾಡುತ್ತಿರುವ ಪದವಿ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು.

ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯುವ ವಿವಿ ಮಟ್ಟದ ಸ್ಪರ್ಧೆಯಲ್ಲಿ ಭೌತ ವಿಜ್ಞಾನ, ಜೀವವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಗಣಿತ ವಿಭಾಗಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 8 ವಿದ್ಯಾರ್ಥಿಗಳನ್ನು ಒಂದು ವಿವಿಯಿಂದ ಆಯ್ಕೆ ಮಾಡಲಾಗುತ್ತದೆ. ರಾಜ್ಯದ ಒಟ್ಟು 11 ವಿವಿಗಳಿಂದ 88 ವಿದ್ಯಾರ್ಥಿಗಳು ಅಕ್ಟೋಬರ್ ತಿಂಗಳಿನಲ್ಲಿ ಹೊಸಪೇಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ನಿಗದಿತ ಅರ್ಜಿಯನ್ನು ಸೆ.8ರೊಳಗೆ ಕರಾವಿಪ ಕೇಂದ್ರ ಕಚೇರಿಗೆ ಸಲ್ಲಿಸಬೇಕು. ಅಂತರ ವಿಶ್ವವಿದ್ಯಾಲಯ ಮಟ್ಟ ಮತ್ತು ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಉಪನ್ಯಾಸ ಸ್ಪರ್ಧೆಯ ವಿಜೇತರಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಳನ್ನು ನೀಡಿ ಗೌರವಿಸಲಾಗುವುದು.

ಈ ಕುರಿತು ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-2671839, 9483549159, 9449530245, 9008442557ನ್ನು ಸಂಪರ್ಕಿಸುವಂತೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗೌರವ ಕಾರ್ಯದರ್ಶಿ ಗಿರೀಶ ಕಡ್ಲೇವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News