×
Ad

ಹಿರಿಯಡ್ಕ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟನೆ

Update: 2018-08-29 22:28 IST

 ಉಡುಪಿ, ಆ.29: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಘಟಕದ 2018-19ನೇ ಸಾಲಿನ ಚಟುವಟಿಕೆಳ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಜಯರಾಮ ಆಚಾರ್ಯ ಸಾಲಿಗ್ರಾಮ ಇವರು ಘಟಕವನ್ನು ಉದ್ಘಾಟಿಸಿ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ವೈದ್ಯ ಡಾ.ಉಮೇಶ್ ಪ್ರಭು ಭಾಗವಹಿಸಿ ರೆಡ್‌ಕ್ರಾಸ್ ಘಟಕದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಅಧ್ಯಕ್ಷತೆ ಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ವಹಿಸಿದ್ದರು.

ಯುವ ರೆಡ್‌ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿ ಡಾ.ರಾಘವೇಂದ್ರ ಪಿ.ಕೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ವೈಆರ್‌ಸಿ ವಿದ್ಯಾರ್ಥಿ ನಾಯಕ ಪವನ್ ಜೋಯಿಸ್ ವಂದಿಸಿದರು. ಸೌಜನ್ಯ ಎಸ್.ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News