ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಆ.31ರಂದು ಸಾರ್ವತ್ರಿಕ ರಜೆ

Update: 2018-08-29 17:09 GMT

ಮಂಗಳೂರು, ಆ.29: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಯು ಆ.31ರಂದು ನಡೆಯಲಿದೆ. ಅಂದು ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಆಯಾ ಮತ ಕ್ಷೇತ್ರಗಳ ಎಲ್ಲ ರಾಜ್ಯ ಸರಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಸರಕಾರಿ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಒಂದು ದಿನದ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.

ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ಸರಕಾರಿ ನೌಕರರು ಚುನಾವಣಾ ಕಾರ್ಯಕ್ರಮಕ್ಕೆ ಹಾಜರಾಗಬೇಕು. ಆದರೆ, ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News