×
Ad

ಪುತ್ತೂರು: ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಮಾಡಿದ ಶಿಕ್ಷಕನ ವಿರುದ್ಧ ದೂರು

Update: 2018-08-30 19:34 IST

ಪುತ್ತೂರು, ಆ. 30: ತಾನು ಕಲಿಸುತ್ತಿರುವ ವಿದ್ಯಾರ್ಥಿನಿಗೆ ಅಶ್ಲೀಲವಾದ ಮೆಸೇಜ್ ಮಾಡಿದ ಆರೋಪದಲ್ಲಿ ಶಿಕ್ಷಕನ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೆಟ್ಟಣಿಗೆ ಮುಡ್ನೂರು ಗ್ರಾಮದ ಸುರುಳಿಮೂಲೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಮಂಜುನಾಥ  ತನ್ನ ಶಾಲೆಯ 10ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಮಾಡಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

ಶಿಕ್ಷಕ ಮಂಜುನಾಥ ಕಳಿಸಿದ ಮೆಸೇಜ್‍ನ್ನು ವಿದ್ಯಾರ್ಥಿನಿ ತನ್ನ ತಂದೆಗೆ ತಿಳಿಸಿದ್ದು, ಈ ವಿಚಾರದ ಬಗ್ಗೆ ಬುಧವಾರ ಶಾಲೆಗೆ ಬಂದ ಪೋಷಕರು ಮತ್ತು ಊರಿನವರು ಶಿಕ್ಷಕನಿಗೆ ದಿಗ್ಬಂಧನ ಹಾಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಆರೋಪಿಯನ್ನು ಶಾಲೆಯಿಂದಲೇ ಬಂಧಿಸಿ ವಶಕ್ಕೆ ಪಡೆದು ಕೊಂಡಿದ್ದರು. ಗುರುವಾರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News