×
Ad

ಶಿಕ್ಷಣ-ಕಲೆಗಳಿಂದ ಬದುಕಿನಲ್ಲಿ ಪರಿಪೂರ್ಣತೆ ಸಾಧ್ಯ: ಅದಮಾರುಶ್ರೀ

Update: 2018-08-30 19:37 IST

ಉಡುಪಿ, ಆ.30: ಪಾಠ, ಪ್ರವಚನಗಳೊಂದಿಗೆ ವಿವಿಧ ಕಲೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಾಗ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೊಂದಿಗೆ ಜೀವನದಲ್ಲಿ ಪರಿಪೂರ್ಣತೆಯನ್ನು ಹೊಂದಲು ಸಾಧ್ಯವಾಗುತ್ತದೆ ಎಂದು ಅದಮಾರು ಮಠದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರು ಹೇಳಿದ್ದಾರೆ.

ಮಂಗಳೂರು ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಮತ್ತು ಉಡುಪಿ ಪೂರ್ಣಪ್ರಜ್ಞ ಕಾಲೇಜುಗಳು ಜಂಟಿಯಾಗಿ ಆಯೋಜಿಸಿದ್ದ ಮಂಗಳೂರು ವಿವಿ ಮಟ್ಟದ ಅಂತರಕಾಲೇಜು ರಂಗಭೂಮಿ ಸ್ಪರ್ಧೆ ‘ರಂಗೋತ್ಸವ-2018’ನ್ನು ಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಮಂಗಳೂರು ವಿವಿಯ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಮತ್ತು ಉಡುಪಿ ಪೂರ್ಣಪ್ರಜ್ಞ ಕಾಲೇಜುಗಳು ಜಂಟಿಯಾಗಿ ಆಯೋಜಿಸಿದ್ದ ಮಂಗಳೂರು ವಿವಿ ಮಟ್ಟದ ಅಂತರಕಾಲೇಜು ರಂಗೂಮಿರ್ಸ್ಪೆ ‘ರಂಗೋತ್ಸವ-2018’ನ್ನು ಪೂರ್ಣಪ್ರಜ್ಞ ಅಡಿಟೋರಿಯಂನಲ್ಲಿ ಗುರುವಾರ ಉದ್ಘಾಟಿಸಿ ಅವರು ಮಾತನಾಡುತಿದ್ದರು. ಶ್ರೀಕೃಷ್ಣನು ಭಗವಂತ ಮಾತ್ರನಲ್ಲ, ಸಾಹಿತ್ಯ, ಸಂಗೀತ ಸೇರಿದಂತೆ 64 ಕಲೆಗಳಲ್ಲೂ ಪರಿಣತನು. ಶ್ರೀ ಕೃಷ್ಣನೇ ಸಾಹಿತ್ಯ, ಸಂಗೀತಗಳ ಮಹತ್ವವನ್ನು ನಮ್ಮ ಜನರಿಗೆ ತನ್ನ ಜೀವನದಿಂದಲೇ ಸಂದೇಶ ರೂಪದಲ್ಲಿ ನೀಡಿದ್ದಾನೆ. ಸಾಹಿತ್ಯ ಹಾಗೂ ಸಂಗೀತದಲ್ಲಿ ಆಸಕ್ತಿಯಿಂದ ಹೃದಯ ಸಂಸ್ಕಾರ ಸಾಧ್ಯ ಎಂದು ಶ್ರೀಅದಮಾರು ಮಠ ಶಿಕ್ಷಣ ಮಂಡಳಿಯ ಅಧ್ಯಕ್ಷರೂ ಆಗಿರುವ ಅದಮಾರು ಶ್ರೀಗಳು ನುಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಂಗಳೂರು ವಿವಿ ಪ್ರಭಾರ ಉಪ ಕುಲಪತಿ ಡಾ.ಕಿಶೋರ್‌ಕುಮಾರ್ ಸಿ.ಕೆ. ಮಾತನಾಡಿ ಮಂಗಳೂರು ವಿವಿಯು ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ದೇಶದ ಗಮನ ಸೆಳೆದಿದೆ. ಇದಕ್ಕೆ ಮುಖ್ಯ ಕಾರಣ ನಮ್ಮ ವಿವಿ ವ್ಯಾಪ್ತಿಯ ಪ್ರತಿಭಾವಂತ ವಿದ್ಯಾರ್ಥಿಗಳು.ಅವರ ಪ್ರತಿಭಾ ವಿಕಸನಕ್ಕೆ ಇಂಥ ಸ್ಪರ್ೆಗಳು ಉತ್ತಮ ವೇದಿಕೆ ಎಂದರು.

ಪೂರ್ಣಪ್ರಜ್ಞ ಕಾಲೇಡು ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ.ಜಿ.ಎಸ್.ಚಂದ್ರಶೇಖರ್ ಮಾತನಾಡಿದರು.ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಗದೀಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರಂಗೋತ್ಸವ-2018ರ ಸಂಯೋಜಕ ರಾದ ಡಾ.ಶ್ರೀಕಾಂತ್ ಸಿದ್ದಾಪುರ, ಜಯಲಕ್ಷ್ಮೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ.ರಮೇಶ್ ಟಿ.ಎಸ್. ಸ್ವಾಗತಿಸಿದರು. ಉಪನ್ಯಾಸಕ ಮಂಜುನಾಥ ಕರಬ ಕಾರ್ಯಕ್ರಮ ನಿರೂಪಿಸಿ, ಪ್ರಾಧ್ಯಾಪಕಿ ಜಯಲಕ್ಷ್ಮೀ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News