ಗೂಂಡಾ ಕಾಯ್ದೆಯಡಿ ರೌಡಿ ರವಿಕುಮಾರ್ ಬಂಧನ

Update: 2018-08-30 15:29 GMT

ಬೆಂಗಳೂರು, ಆ.30: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ರೌಡಿ ರವಿಕುಮಾರ್(ಟ್ಯಾಂಗೋ)ನನ್ನು ಬಸವೇಶ್ವರ ನಗರ ಠಾಣಾ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ನಗರದ ಬಸವೇಶ್ವರ ನಗರ, ಚಂದ್ರಲೇಔಟ್ ಸೇರಿದಂತೆ ಹಲವು ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ಸುಲಿಗೆ ಹಾಗೂ ದರೋಡೆ ಸೇರಿದಂತೆ 15ಕ್ಕೂ ಹೆಚ್ಚು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದನು. ಹಲವು ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಅಪರಾಧ ಕೃತ್ಯಗಳನ್ನು ಮುಂದುವರೆಸಿ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ. ಹೀಗಾಗಿ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎನ್ನಲಾಗಿದೆ.

ಪಶ್ಚಿಮ ವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಮಾಗಡಿ ರೋಡ್‌ನ ಕೃಷ್ಣನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News