ಅತ್ಯುತ್ತಮ ರೈತ ಮಹಿಳಾ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2018-08-30 15:38 GMT

ಬೆಂಗಳೂರು, ಆ. 30: ಬೆಂಗಳೂರು ಕೃಷಿ ವಿಶ್ವ ವಿದ್ಯಾನಿಲಯ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ (ತನ್ನ ಆಡಳಿತದ ವ್ಯಾಪ್ತಿಯಲ್ಲಿ ಬರುವ 10ಜಿಲ್ಲೆಗಳ) ಆಸಕ್ತ ರೈತ ಹಾಗೂ ರೈತ ಮಹಿಳೆಯರಿಂದ ಅತ್ಯುತ್ತಮ ರೈತ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯು ಆಯಾ ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರ ಕಚೇರಿ, ವಿಸ್ತರಣಾ ನಿರ್ದೇಶಕರ ಕಚೇರಿ, ಹೆಬ್ಬಾಳ, ಬೆಂಗಳೂರು ಕೃಷಿ ವಿಜ್ಞಾನ ಕೇಂದ್ರಗಳು (ಹಾಡೋನಹಳ್ಳಿ, ದೊಡ್ಡಬಳ್ಳಾಪುರ, ಚಂದುರಾಯನಹಳ್ಳಿ- ಮಾಗಡಿ, ಕಂದಲಿ- ಹಾಸನ, ಕೊನೇಹಳ್ಳಿ-ತಿಪಟೂರು, ವಿ.ಸಿ.ಫಾರಂ-ಮಂಡ್ಯ, ಕುರುಬೂರು ಫಾರಂ- ಚಿಂತಾಮಣಿ ಮತ್ತು ಹರದನಹಳ್ಳಿ-ಚಾಮರಾಜನಗರ, ವಿಸ್ತರಣಾ ಶಿಕ್ಷಣ ಘಟಕ (ನಾಗನಹಳ್ಳಿ-ಮೈಸೂರು)ದಲ್ಲಿ ದೊರೆಯುತ್ತದೆ. ಅರ್ಜಿ ನಮೂನೆಯು ಬೆಂಗಳೂರು ಕೃಷಿ ವಿ.ವಿ.ವೆಬ್‌ಸೈಟ್‌ನಲ್ಲೂ www.uasbangalore.edu.in ಲಭ್ಯವಿದೆ.

ರಾಜ್ಯ ಪ್ರಶಸ್ತಿಗಳು: ಸಿ.ಭೈರೇಗೌಡ ರಾಜ್ಯ ಮಟ್ಟದ ರೈತ ಪ್ರಶಸ್ತಿ, ಡಾ. ಎಂ.ಎಚ್.ಮರೀಗೌಡ ರಾಜ್ಯ ಮಟ್ಟದ ಅತ್ಯುತ್ತಮ ತೋಟಗಾರಿಕ ರೈತ ಪ್ರಶಸ್ತಿ, ಡಾ. ಆರ್.ದ್ವಾರಕೀನಾಥ್ ಅತ್ಯುತ್ತಮ ರೈತ ಪ್ರಶಸ್ತಿ, ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ಕಾರ್ಯಕರ್ತ ಪ್ರಶಸ್ತಿ, ಕೆನರಾ ಬ್ಯಾಂಕ್ ಪ್ರಾಯೋಜಿತ ಕ್ಯಾನ್ ಬ್ಯಾಂಕ್ ಅತ್ಯುತ್ತಮ ರೈತ ಹಾಗೂ ರೈತ ಮಹಿಳೆ ಪ್ರಶಸ್ತಿ.

ಜಿಲ್ಲಾ ಮಟ್ಟದ ಪ್ರಶಸ್ತಿಗಳು: ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಪ್ರಶಸ್ತಿ, ಜಿಲ್ಲಾ ಮಟ್ಟದ ಅತ್ಯುತ್ತಮ ರೈತ ಮಳೆ ಪ್ರಶಸ್ತಿ.

ತಾಲೂಕು ಮಟ್ಟದ ಪ್ರಶಸ್ತಿಗಳು: ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಪ್ರಶಸ್ತಿ, ತಾಲೂಕು ಮಟ್ಟದ ಅತ್ಯುತ್ತಮ ಯುವ ರೈತ ಮಹಿಳೆ ಪ್ರಶಸ್ತಿ. ಈ ಪ್ರಶಸ್ತಿಗಳನ್ನು ಬೆಂಗಳೂರು ಕೃಷಿ ವಿವಿ ನವೆಂಬರ್ 15ಕ್ಕೆ ನಡೆಯಲಿರುವ ಕೃಷಿಮೇಳದಲ್ಲಿ ಪ್ರದಾನ ಮಾಡಲಾಗುವುದು.

ಭರ್ತಿಮಾಡಿದ ಅರ್ಜಿಯನ್ನು ಸಲ್ಲಿಸಲು ಕೊನೆಯ ಅಕ್ಟೋಬರ್ 12. ಹೆಚ್ಚಿನ ವಿವರಗಳಿಗೆ ವಿಸ್ತರಣಾ ನಿರ್ದೇಶಕರ ಕಚೇರಿ, ಕೃಷಿ ವಿವಿ, ಹೆಬ್ಬಾಳ, ಬೆಂಗಳೂರು- 560 024 ಇವರನ್ನು ಸಂಪರ್ಕಿಸಬಹುದು. ದೂ.ಸಂಖ್ಯೆ-080-2341 8883 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News