ನೃಪತುಂಗ ಪ್ರಶಸ್ತಿಗೆ ಡಾ.ಸಿದ್ದಲಿಂಗಯ್ಯ ಆಯ್ಕೆ

Update: 2018-08-30 17:25 GMT

ಬೆಂಗಳೂರು, ಆ.30: ಸಾಹಿತ್ಯ ಕ್ಷೇತ್ರದಲ್ಲಿ ಅಪಾರವಾದ ಸೇವೆ ಸಲ್ಲಿಸಿರುವವರಿಗೆ ನೀಡುವ ನೃಪತುಂಗ ಪ್ರಶಸ್ತಿಗೆ ಪ್ರಸಕ್ತ ಸಾಲಿಗೆ ದಲಿತ ಕವಿ ಡಾ.ಸಿದ್ದಲಿಂಗಯ್ಯ ಆಯ್ಕೆಯಾಗಿದ್ದಾರೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಸಾಪದಲ್ಲಿ ಸ್ಥಾಪಿಸಿರುವ ನೃಪತುಂಗ ದತ್ತಿ ಪ್ರಶಸ್ತಿಯನ್ನು ಇತ್ತೀಚಿಗೆ ನಡೆದ ಸಭೆಯಲ್ಲಿ ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್, ಹಿರಿಯ ಕವಿ ಡಾ. ರಂಜಾನ್ ದರ್ಗಾ, ವಿಮರ್ಶಕ ಎಸ್.ಆರ್.ವಿಜಯಶಂಕರ್, ಬಿಎಂಟಿಸಿ ಭದ್ರತೆ ಮತ್ತು ಜಾಗೃತಿ ನಿರ್ದೇಶಕ ಡಾ.ಎ.ಎನ್. ಪ್ರಕಾಶ್‌ಗೌಡ, ಕಾರ್ಮಿಕ ಕಲ್ಯಾಣ ಅಧಿಕಾರಿ ವಿಜಯಕುಮಾರ್ ರೈ ಸೇರಿದಂತೆ ಇನ್ನಿತರರನ್ನೊಳಗೊಂಡ ಆಯ್ಕೆ ಸಮಿತಿ ಸಿದ್ಧಲಿಂಗಯ್ಯರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಐವರಿಗೆ ಮಯೂರವರ್ಮ ದತ್ತಿ ಪ್ರಶಸ್ತಿ: ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಗಣನೀಯ ಸಾಧನೆ ಮಾಡಿದ 45 ವರ್ಷದೊಳಗಿನ ಸಾಹಿತಿಗಳಿಗೆ ಬಿಎಂಟಿಸಿ ಕೊಡಮಾಡುವ ಮಯೂರವರ್ಮ ದತ್ತಿ ಪ್ರಶಸ್ತಿಯನ್ನು ಡಾ.ಎಂ.ಎನ್.ನಂದೀಶ್, ಡಾ. ಶಿವರಾಜ (ಬ್ಯಾಡರಹಳ್ಳಿ), ಲಕ್ಷ್ಮಣ ನಂದಿಹಾಳ, ಕೃಷ್ಣಪ್ಪ ಎಸ್.ಗುಡಗುಡಿ ಹಾಗೂ ಗಣಪತಿ ಗೊ. ಚಲವಾದಿ ಆಯ್ಕೆಯಾಗಿದ್ದಾರೆ. ನೃಪತುಂಗ ಪ್ರಶಸ್ತಿಯು 7ಲಕ್ಷ ರೂ. ನಗದು ಹಾಗೂ ಪ್ರಶಸ್ತಿ ಫಲಕ ಹೊಂದಿದ್ದು, ಮಯೂರ ವರ್ಮ ಪ್ರಶಸ್ತಿಯು 25 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹೊಂದಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆ.9ರಂದು ಬೆಳಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News