×
Ad

ನೇಣು ಬಿಗಿದು ಕಂದಾವರ ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ

Update: 2018-08-30 22:57 IST

ಮಂಗಳೂರು, ಆ. 30: ಕಂದಾವರ ಗ್ರಾಮ ಪಂಚಾಯತ್ ಕಾರ್ಯದರ್ಶಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂದಾವರದ ಎಕ್ಕಾರು ಗ್ರಾಮದಲ್ಲಿ ಗುರುವಾರ ನಡೆದಿದೆ.

ಬಾಗಲಕೋಟೆ ಮೂಲದ ಮುದುಕಪ್ಪ ವಿಠಲ ಮುರುನಾಲ್ (46) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.

ಅವರು ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಲಾಗಿದೆ.

ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News