×
Ad

ಚುನಾವಣಾ ಪ್ರಚಾರದ ಅವಧಿ ಮುಗಿದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳಿಂದ ಪತ್ರಿಕಾಗೋಷ್ಠಿ ಆರೋಪ: ದೂರು

Update: 2018-08-30 23:20 IST

ಬಂಟ್ವಾಳ, ಆ. 30: ಬಹಿರಂಗ ಚುನಾವಣಾ ಪ್ರಚಾರದ ಅವಧಿ ಮುಗಿದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗಳು ಪತ್ರಿಕಾಗೋಷ್ಠಿ ನಡೆಸಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಲಕ್ಷಣ್ ರಾಜ್ ಅವರು ಗುರುವಾರ ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ. 

ಪಾಣೆಮಂಗಳೂರು 23ನೆ ವಾರ್ಡಿನ ಸಮೀಪದ ಆಡಿಟೋರಿಯಂ ಒಂದರ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷದ ವಿವಿಧ ಜವಾಬ್ದಾರಿಯನ್ಮು ಹೊಂದಿದ ಮತ್ತು ಜನಪ್ರತಿನಿಧಿಗಳು ಪಕ್ಷದ ಪರವಾಗಿ ಪ್ರಚಾರ ಮಾಡಿದ್ದಾರೆ. ಜೊತೆಗೆ ದಿನಪತ್ರಿಕೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಪಡೆದಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ತನಿಖೆ ನಡೆಸಿ ಪ್ರಚಾರ ಕಾರ್ಯ ನಡೆಸಿದವರ ಹಾಗೂ ಅಭ್ಯರ್ಥಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News