×
Ad

ಶಿವಮೊಗ್ಗ: ವಿದ್ಯುತ್ ಹರಿದು ಲೈನ್‍ಮ್ಯಾನ್ ಗಂಭೀರ

Update: 2018-08-30 23:56 IST

ಶಿವಮೊಗ್ಗ, ಆ. 30: ವಿದ್ಯುತ್ ಕಂಬ ದುರಸ್ತಿ ಪಡಿಸುವ ವೇಳೆ ವಿದ್ಯುತ್ ಹರಿದ ಪರಿಣಾಮ ಲೈನ್‍ಮ್ಯಾನ್‍ರೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿ ಗ್ರಾಮದಲ್ಲಿ ನಡೆದಿದೆ. 

ಬಿಜಾಪುರ ಜಿಲ್ಲೆಯ ಲಾಲಾಸಾಬ್ ಗಂಭೀರ ಗಾಯಗೊಂಡ ಲೈನ್‍ಮ್ಯಾನ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಆಕ್ರೋಶ: ಘಟನೆಯಿಂದ ರೊಚ್ಚಿಗೆದ್ದ ಸ್ಥಳೀಯ ಗ್ರಾಮಸ್ಥರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ವಿದ್ಯುತ್ ಕಂಬಗಳಲ್ಲಿನ ಲೋಪದೋಷ ಸರಿಪಡಿಸಲು ಕಾಲಮಿತಿಯಲ್ಲಿ ಕ್ರಮಕೈಗೊಳ್ಳದಿದ್ದರೆ, ಮೆಸ್ಕಾಂ ಅಧಿಕಾರಿಗಳ ವಿರುದ್ದ ಬೀದಿಗಿಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News