ಬ್ರಹ್ಮಪುತ್ರ ಪ್ರವಾಹ: ಭಾರತಕ್ಕೆ ಎಚ್ಚರಿಕೆ ನೀಡಿದ ಚೀನ

Update: 2018-08-30 18:36 GMT

ಇಟಾನಗರ/ಹೊಸದಿಲ್ಲಿ, ಆ. 30: ಬ್ರಹ್ಮಪುತ್ರಾ ನದಿಯಲ್ಲಿ ಪ್ರವಾಹದ ಮಟ್ಟ ಏರಿಕೆಯಾಗಲಿದೆ ಎಂದು ಚೀನ ಭಾರತಕ್ಕೆ ಮುನ್ನೆಚ್ಚರಿಕೆ ನೀಡಿದೆ. ಇದರಿಂದ ನದಿಯ ಕೆಳಭಾಗದಲ್ಲಿರುವ ಅರುಣಾಚಲ ಪ್ರದೇಶ ಹಾಗೂ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಲಿದೆ ಎಂದು ಅರುಣಾಚಲ ಪ್ರದೇಶದ ಸಂಸದ ನಿನೋಂಗ್ ಎರಿಂಗ್ ಗುರುವಾರ ತಿಳಿಸಿದ್ದಾರೆ.

 ಚೀನದಲ್ಲಿ ತ್ಸಾಂಗ್‌ಪೋ ಎಂದು ಕರೆಯಲಾಗುವ ನದಿಗೆ ಅರುಣಾಚಲ ಪ್ರದೇಶದಲ್ಲಿ ಸಿಯಾಂಗ್ ಹಾಗೂ ಅಸ್ಸಾಂ ನಲ್ಲಿ ಬ್ರಹ್ಮಪುತ್ರ ಎಂದು ಕರೆಯಲಾಗುತ್ತದೆ. ಚೀನಾದಲ್ಲಿ ತ್ಸಾಂಗ್‌ಪೋ ನದಿಯಲ್ಲಿ ಕಳೆದ 150 ವರ್ಷಗಳಲ್ಲಿ ಪ್ರವಾಹ ಅತ್ಯಧಿಕ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಚೀನ ಭಾರತಕ್ಕೆ ಎಚ್ಚರಿಕೆ ನೀಡಿದೆ ಎಂದು ಕೇಂದ್ರ ಜಲ ಸಂಪನ್ಮೂಲ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

  ಚೀನಾದಲ್ಲಿ ತ್ಸಾಂಗ್‌ಪೋ ನದಿ ಜಲಾ ನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿ ರುವ ಹಿನ್ನೆಲೆಯಲ್ಲಿ ನದಿ ಉಕ್ಕಿ ಹರಿಯು ತ್ತಿದೆ. ಇದರಿಂದ ಅರುಣಾಚಲ ಪ್ರದೇಶದ ಹಲವೆಡೆ ಪ್ರವಾಹದ ಆತಂಕ ಎದುರಾಗಿದೆ ಎಂದು ಎರಿಂಗ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News