ಪರಿಹಾರ ಕೇಂದ್ರದಲ್ಲಿ 2045 ಮಂದಿ ಸಂತ್ರಸ್ತರು: ಜಿಲ್ಲಾಡಳಿತದಿಂದ ಪರಿಹಾರ ಕಾರ್ಯ ಚುರುಕು

Update: 2018-08-31 11:54 GMT

ಮಡಿಕೇರಿ, ಆ.31: ಜಿಲ್ಲೆಯಾದ್ಯಾಂತ ಭಾರೀ ಮಳೆಯಿಂದಾಗಿ ಹಲವು ಭಾಗಗಳಲ್ಲಿ ತೀವ್ರ ಭೂಕುಸಿತ ಉಂಟಾಗಿತ್ತು, ಭೂಕುಸಿತ ಹಾಗೂ ಪ್ರವಾಹದಿಂದಾಗಿ ಹಲವು ಮಂದಿ ಸಂತ್ರಸ್ತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ವಸತಿ ಕಲ್ಪಿಸಲಾಗುತ್ತಿದೆ.   

ಸಂತ್ರಸ್ತರಿಗೆ ವಿತರಿಸಲು ರಾಜ್ಯ, ಜಿಲ್ಲೆಯ ವಿವಿಧೆಡೆಗಳಿಂದ, ಜನಪ್ರತಿನಿಧಿಗಳಿಂದ, ಸಾರ್ವಜನಿಕರಿಂದ, ಸಂಘ ಸಂಸ್ಥೆಗಳಿಂದ ಸ್ವೀಕೃತವಾಗುತ್ತಿರುವ ಪರಿಹಾರ ಸಾಮಾಗ್ರಿಗಳನ್ನು ಜಿಲ್ಲೆಯ ದಾಸ್ತಾನು ಕೇಂದ್ರಗಳಾದ ನಗರದ ಜಿಲ್ಲಾಡಳಿತ ಭವನ, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಕಟ್ಟಡ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಗೋದಾಮು, ಕುಶಾಲನಗರ ಮತ್ತು ಪೊನ್ನಂಪೇಟೆಯ ಹಳೇ ನ್ಯಾಯಾಲಯ ಕಟ್ಟಡ ಕೇಂದ್ರಗಳಲ್ಲಿ ದಾಸ್ತಾನು ಮಾಡಲು ವ್ಯವಸ್ಥೆ ಮಾಡಲಾಗಿದೆ.  

ಜಿಲ್ಲೆಗೆ ಆಹಾರ ಸಾಮಾಗ್ರಿಗಳು, ವೈದ್ಯಕೀಯ ಸಾಮಾಗ್ರಿಗಳು, ಕುಡಿಯುವ ನೀರು ಹಾಗೂ ಹಾಗೂ ಇತರೆ ಅಗತ್ಯ ಪರಿಹಾರ ಸಾಮಾಗ್ರಿಗಳು 26 ಭಾರಿ ಹಾಗೂ ಲಘು ವಾಹನಗಳಲ್ಲಿ ಆಗಸ್ಟ್ 30 ರಂದು ಜಿಲ್ಲೆಗೆ ಬಂದಿರುತ್ತದೆ. ಹಾಗೂ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ ನೆರೆ ಸಂತ್ರಸ್ಥರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯಾಧಿಕಾರಿಗಳ, ಗ್ರಾಮ ಪಂಚಾಯತ್ ಜನಪ್ರತಿನಿಧಿಗಳ ಮುಖಾಂತರ ಹಂಚಿಕೆ ಮಾಡಲು 32 ಲಘು ವಾಹನಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.

ಪ್ರಮುಖ ಸಾಮಾಗ್ರಿಗಳು: 32760 ಕೆ.ಜಿ. ಅಕ್ಕಿ, 2566 ಕೆ.ಜಿ. ಸಕ್ಕರೆ, 2591 ಲೀಟರ್ ಎಣ್ಣೆ, 2534.5 ಕೆ.ಜಿ. ತೊಗರಿ ಬೆಳೆ, 446 ಬಾಕ್ಸ್ ಕುಡಿಯುವ ನೀರಿನ ಬಾಟಲಿ, 10 ಹಾಲಿನ ಬಾಕ್ಸ್, 62 ಬಾಕ್ಸ್ ಬಿಸ್ಕೆಟ್, 632 ಹೊದಿಕೆಗಳು, 222 ಸ್ವೆಟರ್, 376 ಉಡುಗೆ ವಸ್ತುಗಳನ್ನು ಜಿಲ್ಲಾಡಳಿತದ ವತಿಯಂದ ಸಂತ್ರಸ್ತರಿಗೆ ಆಗಸ್ಟ್ 30 ರಂದು ವಿತರಣೆ ಮಾಡಲಾಗಿದೆ.

ಪರಿಹಾರ ಕೇಂದ್ರಗಳಲ್ಲಿರುವ ಸಂತ್ರಸ್ತರ ವಿವರ: ಮಡಿಕೇರಿ ತಾಲೂಕಿನ 15 ಪರಿಹಾರ ಕೇಂದ್ರಗಳಲ್ಲಿ 520 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 749 ಗಂಡು, ಮತ್ತು 674 ಹೆಣ್ಣು ಸೇರಿದಂತೆ 1423 ಜನ ಸಂತ್ರಸ್ತರಿದ್ದಾರೆ.

ಸೋಮವಾರಪೇಟೆ ತಾಲೂಕಿನ 04 ಪರಿಹಾರ ಕೇಂದ್ರಗಳಲ್ಲಿ 214 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 288 ಗಂಡು ಮತ್ತು 308 ಹೆಣ್ಣು ಸೇರಿದಂತೆ ಒಟ್ಟು 596 ಜನ ಸಂತ್ರಸ್ತರಿದ್ದಾರೆ.

ವಿರಾಜಪೇಟೆ ತಾಲೂಕಿನ 01 ಪರಿಹಾರ ಕೇಂದ್ರಗಳಲ್ಲಿ 06 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 12 ಗಂಡು ಮತ್ತು 14 ಹೆಣ್ಣು ಸೇರಿದಂತೆ ಒಟ್ಟು 26 ಜನ ಸಂತ್ರಸ್ತರಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿರುವ 20 ಪರಿಹಾರ ಕೇಂದ್ರಗಳಲ್ಲಿ ಒಟ್ಟು 741 ಕುಟುಂಬಗಳು ಆಶ್ರಯ ಪಡೆಯುತ್ತಿದ್ದು, ಅವರಲ್ಲಿ 1049 ಪುರುಷರು ಮತ್ತು 996 ಮಹಿಳೆಯರು ಸೇರಿದಂತೆ ಒಟ್ಟು 2,045 ಜನ ಸಂತ್ರಸ್ತರಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News