ಚಾರ್ಮಾಡಿ ಘಾಟ್: ಭಾರೀ ವಾಹನಗಳ ಸಂಚಾರ ನಿಷೇಧ

Update: 2018-08-31 13:36 GMT

ಚಿಕ್ಕಮಗಳೂರು, ಆ.31: ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧದಿಂದಾಗಿ ಎಲ್ಲಾ ರೀತಿಯ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುತ್ತಿದ್ದು, ವಾಹನಗಳ ದಟ್ಟಣೆ ಹೆಚ್ಚಾಗಿದ್ದಲ್ಲದೇ ಅಲ್ಲಲ್ಲಿ ಭೂಕುಸಿತ ಕಾಣಿಸಿಕೊಂಡಿದೆ. 

ಈ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಪಾಯಕಾರಿ ಸ್ಥಿತಿಯಿಂದಾಗಿ ಸಾರ್ವಜನಿಕರಿಗೆ ಪ್ರಯಾಣ ಕಷ್ಟಕರವಾಗಿದ್ದು, ಸಾರ್ವಜನಿಕ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 234 ರ ಮೂಡಿಗೆರೆ ತಾಲೂಕು ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಸಂಚರಿಸುವ ಎಲ್ಲಾ ರೀತಿಯ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News