ಭ್ರಷ್ಟಾಚಾರ, ಕರ್ತವ್ಯ ಲೋಪ ಆರೋಪ: ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ವಿರುದ್ಧ ಮುಖ್ಯ ಕಾರ್ಯದರ್ಶಿಗೆ ದೂರು

Update: 2018-08-31 13:21 GMT

ಬೆಂಗಳೂರು, ಆ. 31: ‘ಪರೀಕ್ಷೆ ಸುಧಾರಣೆ ಹೆಸರಿನಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಅವರು ಭ್ರಷ್ಟಾಚಾರ ಮತ್ತು ಗಂಭೀರ ಕರ್ತವ್ಯಲೋಪ ಎಸಗಿದ್ದು, ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಕೋರಿ ಮೈಸೂರಿನ ರೈತಸಂಘದ ಮಲ್ಲೇಶ್, ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ದೂರು ನೀಡಿದ್ದಾರೆ.

‘ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮರಾ ಅಳವಡಿಸುವ ಸಂಬಂಧ ಸಂಸ್ಥೆಯೊಂದಕ್ಕೆ ಟೆಂಡರ್ ಕರೆಯದೆ 1.8ಕೋಟಿ ರೂ.ಹಣ ಬಿಡುಗಡೆ ಮಾಡಿ ನಿಯಮ ಉಲ್ಲಂಘಿಸಿದ್ದಾರೆ. ಅಲ್ಲದೆ, ಆ ಸಂಸ್ಥೆಯಿಂದಲೂ ಸಿ.ಶಿಖಾ ಅವರು ಕಮಿಷನ್ ಪಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News