ಕೆಎಸ್ಸಾರ್ಟಿಸಿಗೆ ಇ-ಆಡಳಿತಕ್ಕೆ ಪುರಸ್ಕಾರ

Update: 2018-08-31 13:52 GMT

ಬೆಂಗಳೂರು, ಆ. 31: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ)ಗೆ ನಾಗರಿಕ ಸ್ನೇಹಿ ಇ-ಆಡಳಿತ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯ ಸರಕಾರದ 5 ಲಕ್ಷ ರೂ.ನಗದು ಸಹಿತ ‘ಇ-ಆಡಳಿತ’ ಪ್ರಶಸ್ತಿ ದಕ್ಕಿದೆ.

ಶುಕ್ರವಾರ ವಿಧಾನಸೌಧದ ಮೂರನೆ ಮಹಡಿಯಲ್ಲಿನ ಸಮಿತಿ ಕೊಠಡಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರು, ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಅವರಿಗೆ ಪ್ರಶಸ್ತಿಯ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಕೆಎಸ್ಸಾರ್ಟಿಸಿ ಸಾರ್ವಜನಿಕ ಸಂಪರ್ಕಾಧಿಕಾರಿ ಲತಾ ಸೇರಿದಂತೆ ಸಂಸ್ಥೆ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News