ಶಾಸಕರ ನಿಧಿಯಿಂದ ಕೊಡಗಿಗೆ 25 ಲಕ್ಷ ರೂ.ನೀಡಲು ಸ್ಪೀಕರ್ ಪತ್ರ

Update: 2018-08-31 16:23 GMT

ಬೆಂಗಳೂರು, ಆ. 31: ಕೊಡಗಿನ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ 25ಲಕ್ಷ ರೂ.ನೀಡಲು ವಿಧಾನಸಭೆ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಕೋರಿದ್ದು, ಈ ಸಂಬಂಧ ಹಣವ್ಯಯ ಮಾಡಲು ಅಗತ್ಯ ತಿದ್ದುಪಡಿ ತರಬೇಕೆಂದು ಮುಖ್ಯಮಂತ್ರಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಕೆ.ಜಿ.ಬೋಪಯ್ಯ, ಕೊಡಗು ಜಿಲ್ಲೆ ನೆರೆ ಹಿನ್ನೆಲೆಯಲ್ಲಿ ರಸ್ತೆ, ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಹೆಚ್ಚಿನ ನೆರವಿನ ಅಗತ್ಯವಿದ್ದು, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 50ಲಕ್ಷ ರೂ. ನೀಡಬೇಕು ಎಂದು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಇಬ್ಬರು ಶಾಸಕರು ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಅವರು, ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಎಲ್ಲ ಶಾಸಕರಿಗೆ ಪತ್ರ ಬರೆದಿದ್ದು, ತಮ್ಮ ಕ್ಷೇತ್ರದ ಭೌಗೋಳಿಕ ವ್ಯಾಪ್ತಿ ಮೀರಿ ಈ ಹಣವನ್ನು ಬಳಕೆ ಮಾಡಲು ಸರಕಾರ ಅಗತ್ಯ ತಿದ್ದುಪಡಿ ತರಬೇಕು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News