ಮೈಸೂರು: ಆಕಸ್ಮಿಕ ವಿದ್ಯುತ್ ಪ್ರವಹಿಸಿ ವ್ಯಕ್ತಿ ಸಾವು

Update: 2018-08-31 17:10 GMT

ಮೈಸೂರು,ಆ.31: ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ ಕಾರಣ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಲಿಡೊ ಚಿತ್ರಮಂದಿರದ ಬಳಿ ನಡೆದಿದೆ.

ಮೃತರನ್ನು ಅಗ್ರಹಾರ ನಿವಾಸಿ ಗುರುಪ್ರಸಾದ್(50) ಎಂದು ಗುರುತಿಸಲಾಗಿದೆ. ಲಿಡೊ ಚಿತ್ರಮಂದಿರದ ಕಟ್ಟಡಕ್ಕೆ ಬಣ್ಣ ಬಳಿಯುವ ಕಾರ್ಯ ನಡೆಯುತ್ತಿದ್ದು ಪೇಂಟರ್ ಗಳಿಗೆ ಸಹಾಯಕರಾಗಿ ಕೆಲಸ ಮಾಡುತ್ತಿದ್ದರು. ಕಬ್ಬಿಣದ ಏಣಿಯನ್ನು ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ಏಣಿ ತಾಕಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ಸಂಬಂಧ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News