ಮಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್ 1 ಕೋಟಿ ರೂ. ನೆರವು

Update: 2018-08-31 17:25 GMT

ಮಂಗಳೂರು, ಆ.31: ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ಎಂ.ಆರ್.ಪಿ.ಎಲ್. ಸಂಸ್ಥೆ ವತಿಯಿಂದ 1 ಕೋಟಿ ರೂ. ನೆರವನ್ನು ನೀಡಲಾಗಿದೆ.

ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಒಂದು ಕೋಟಿ ರೂ. ಚೆಕ್ ಅನ್ನು ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಎಂ. ವೆಂಕಟೇಶ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಎಂಆರ್‌ಪಿಎಲ್ ಹಣಕಾಸು ನಿರ್ದೇಶಕ ಎ.ಕೆ. ಸಾಹೂ, ಗ್ರೂಪ್ ಜನರಲ್ ಮೆನೇಜರ್ ಬಿ.ಎಚ್.ವಿ. ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News