ಕ್ರೀಡಾಸ್ಪೂರ್ತಿಯಿಂದ ಜೀವನದಲ್ಲಿ ಯಶಸ್ವಿ ಸಾಧ್ಯ: ಜಸಂತಾ ಅನಿಲ್‍ ಕುಮಾರ್

Update: 2018-08-31 18:36 GMT

ಚಿಕ್ಕಮಗಳೂರು, ಆ.31: ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆ ಮತ್ತು ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಆತ್ಮ ವಿಶ್ವಾಸ ವೃದ್ಧಿಯಾಗಿ ಜೀವನದಲ್ಲಿ ಯಶಸ್ವಿ ಕಾಣಲು ಸಾದ್ಯ ಎಂದು ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಂತಾ ಅನಿಲ್‍ಕುಮಾರ್ ತಿಳಿಸಿದರು.

ಶುಕ್ರವಾರ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾ ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ ಬೈಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವತಿಯಿಂದ ಏರ್ಪಡಿಸಲಾಗಿದ್ದ ಜಾಗರ ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ದೊರೆತ ಅವಕಾಶಗಳನ್ನು ಉಪಯೋಗಿಸಿಕೊಂಡು ಕಲೆ, ಸಾಹಿತ್ಯ, ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ತೋರಿಸಬೇಕೆಂದು ತಿಳಿಸಿದರು.

ತಾಲ್ಲೂಕು ಪಂ. ಅಧ್ಯಕ್ಷ ಜಯಣ್ಣ ಮಾತನಾಡಿ ಕ್ರೀಡೆ ನಮ್ಮ ದೈಹಿಕ ಮತ್ತು ಮಾನಸಿಕ ಸದೃಡತೆಗೆ ಸಹಕಾರಿ ಇದರಿಂದ ನಮ್ಮ ಸ್ನೇಹ ಸಂಬಂದ ಹೆಚ್ಚಾಗುತ್ತದೆ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ. ಸೊಲು ಮತ್ತು ಗೆಲುವನ್ನು ಸ್ವೀಕರಿಸುವ ವಿಶಾಲ ಮನೋಭಾವನೆಯನ್ನು ವಿದ್ಯಾರ್ಥಿಗಳು ರೂಡಿಸಿಕೊಳ್ಳಬೇಕೆಂದರು.

ಈ ಸಂದರ್ಭ ತಾಪಂ ಸದಸ್ಯ ದೀಪ ನಾಗೇಶ್, ಕ್ಷೇತ್ರ ಶಿಕ್ಷಣ ಅಧಿಕಾರಿ ವೆಂಕಟರಾಮು, ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಎಸ್.ಡಿ.ಎಮ್.ಸಿ ಅಧ್ಯಕ್ಷ ರುದ್ರಾಚಾರ್, ಮಾಜಿ ಅಧ್ಯಕ್ಷರಾದ ತೀರ್ಥ ಹೇಮಚಂದ್ರ, ಕಾಫಿ ಬೆಳೆಗಾರರಾದ ಶ್ಯಾಮ್, ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಕೆರೆಮಕ್ಕಿ ಮಹೇಶ್, ತಾಲ್ಲೂಕು ದೈಹಿಕ ಪರಿ ವೀಕ್ಷಕರಾದ ರವಿಕುಮಾರ್, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್, ಸುಂದ್ರೇಶ್, ಚಂದ್ರಯ್ಯ, ಕಾಳಯ್ಯ, ಮಹೇಶ್ವರಪ್ಪ ಉಪಸ್ಥಿತರಿದ್ದರು, ಕೇಶವ್ ಸ್ವಾಗತಿಸಿ ಬಸವರಾಜ್ ನಿರೂಪಿಸಿ ವಿಶ್ವನಾಥ್ ವಂದಿಸಿದರು. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News