ಏಶ್ಯಾಕಪ್‌ಗೆ ಭಾರತ ತಂಡ ಪ್ರಕಟ: ಕೊಹ್ಲಿಗೆ ವಿಶ್ರಾಂತಿ, ರೋಹಿತ್ ನಾಯಕ

Update: 2018-09-01 08:09 GMT

ಹೊಸದಿಲ್ಲಿ, ಸೆ.1: ಮುಂಬರುವ ಯುಎಇನಲ್ಲಿ ನಡೆಯಲಿರುವ ಏಶ್ಯಾಕಪ್‌ಗೆ ಶನಿವಾರ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಪ್ರಸ್ತುತ ಇಂಗ್ಲೆಂಡ್ ಕ್ರಿಕೆಟ್ ಪ್ರವಾಸದಲ್ಲಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದ್ದು, ರೋಹಿತ್ ಶರ್ಮಾಗೆ ನಾಯಕತ್ವ ಹೊಣೆ ನೀಡಲಾಗಿದೆ.

ಏಶ್ಯಾಕಪ್ ಟೂರ್ನಿಯು ಸೆ.15 ರಿಂದ ಆರಂಭವಾಗಲಿದ್ದು ಸೆ.28 ರಂದು ಫೈನಲ್ ಪಂದ್ಯ ನಡೆಯುವುದು. ಟೂರ್ನಿಯಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಕ್ವಾಲಿಫೈಯರ್ ತಂಡಗಳು ಆಡುತ್ತವೆ. ಭಾರತ ತಂಡ ಇಂಗ್ಲೆಂಡ್ ವಿರುದ್ಧ ಕೊನೆಯ ಟೆಸ್ಟ್ ಆಡಿದ ವಾರದ ಬಳಿಕ ಸೆ.18 ರಂದು ಟೂರ್ನಿಯಲ್ಲಿ ಮೊದಲ ಪಂದ್ಯವನ್ನಾಡಲಿದೆ.

ಕೊಹ್ಲಿಗೆ ಕೆಲಸದ ಭಾರದ ಹಿನ್ನೆಲೆಯಲ್ಲಿ ಎಂಎಸ್‌ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯು ವಿಶ್ರಾಂತಿ ನೀಡಲು ಬಯಸಿದೆ. ಕೊಹ್ಲಿ ಕಳೆದ ಕೆಲವು ಸಮಯದಿಂದ ನಿರಂತರ ಕ್ರಿಕೆಟ್ ಆಡುತ್ತಿದ್ದಾರೆ.

ಏಶ್ಯಾಕಪ್‌ಗೆ ಭಾರತ ತಂಡ:ರೋಹಿತ್ ಶರ್ಮಾ(ನಾಯಕ), ಶಿಖರ್ ಧವನ್(ಉಪ ನಾಯಕ), ಕೆ.ಎಲ್.ರಾಹುಲ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಕೇದಾರ್ ಜಾಧವ್, ಎಂ.ಎಸ್. ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕುಲ್‌ದೀಪ್ ಯಾದವ್, ಯಜುವೇಂದ್ರ ಚಹಾಲ್,ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಜಸ್‌ಪ್ರಿತ್ ಬುಮ್ರಾ, ಶಾರ್ದೂಲ್ ಠಾಕೂರ್, ಖಲೀಲ್ ಅಹ್ಮದ್.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News