ಏಶ್ಯನ್ ಗೇಮ್ಸ್: ಪಾಕಿಸ್ತಾನವನ್ನು ಮಣಿಸಿದ ಭಾರತ ಹಾಕಿ ತಂಡಕ್ಕೆ ಕಂಚು

Update: 2018-09-01 12:45 GMT

ಜಕಾರ್ತ, ಸೆ.1: ಹಾಲಿ ಚಾಂಪಿಯನ್ ಭಾರತ ಪುರುಷರ ಹಾಕಿ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 2-1 ಅಂತರದಿಂದ ಸೋಲಿಸುವುದರೊಂದಿಗೆ ಏಶ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದೆ.

ಶನಿವಾರ ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಭಾರತದ ಪರ ಆಕಾಶ್ ದೀಪ್ ಸಿಂಗ್ ಪಂದ್ಯ ಆರಂಭದ 3ನೇ ನಿಮಿಷದಲ್ಲಿ ಮೊದಲ ಗೋಲು ಬಾರಿಸಿತು. 50ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಎರಡನೇ ಗೋಲು ಬಾರಿಸಿದ ಹರ್ಮನ್‌ಪ್ರೀತ್ ಸಿಂಗ್ ಭಾರತದ ಮುನ್ನಡೆಯನ್ನು 2-0ಗೆ ಏರಿಸಿದರು.

ಪಾಕಿಸ್ತಾನ 52ನೇ ನಿಮಿಷದಲ್ಲಿ ಏಕೈಕ ಗೋಲು ಬಾರಿಸಿತು. ಮುಹಮ್ಮದ್ ಆತೀಕ್ ಪಾಕ್ ಪರ ಸಮಾಧಾನಕರ ಗೋಲು ಬಾರಿಸಿದರು.

ಪಾಕಿಸ್ತಾನ 4 ಪೆನಾಲ್ಟಿ ಕಾರ್ನರ್ ಅವಕಾಶವನ್ನು ಗೋಲಾಗಿ ಪರಿವರ್ತಿಸಲು ವಿಫಲವಾಯಿತು. ಭಾರತ ಎರಡು ಪೆನಾಲ್ಟಿ ಕಾರ್ನರ್‌ನಲ್ಲಿ ಒಂದನ್ನು ಸದುಪಯೋಗಪಡಿಸಿಕೊಂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News