ಮಾದಕ ವಸ್ತುಗಳ ವಿರುದ್ಧ ಜಾಗೃತಿ ಜಾಥಾ

Update: 2018-09-01 13:50 GMT

ಬೆಂಗಳೂರು, ಸೆ.1: ಮಾದಕ ದ್ರವ್ಯ ಸೇವನೆಯ ವಿರುದ್ಧ ಬೆಂಗಳೂರು ನಗರ ಪೊಲೀಸ್ ಸಹಯೋಗದೊಂದಿಗೆ ಜಾಗೃತಿ ಜಾಥಾ ನಡೆಸಿದರು.

ಶನಿವಾರ ಚಾಮರಾಜಪೇಟೆಯ ಎಸ್‌ಆರ್‌ಎನ್ ಆದರ್ಶ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮಾದಕ ವಸ್ತು ವಿರುದ್ಧದ ತಿಳುವಳಿಕೆ ಜಾಥಾದಲ್ಲಿ 1 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಯುವ ಪೀಳಿಗೆ ಮಾದಕ ವಸ್ತುಗಳಿಗೆ ದಾಸರಾಗದೆ ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳುವಂತೆ ಆಶಾದಾಯಕ ಚಿಂತನೆ ನಡೆಸಬೇಕು. ದುಶ್ಚಟದ ವ್ಯಕ್ತಿಗಳಿಂದ ಸಮಾಜದ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ. ಆದ್ದರಿಂದ ಎಲ್ಲರೂ ಜಾಗೃತರಾಗುವ ಮೂಲಕ ಸಮಾಜವನ್ನು ದುಶ್ಚಟಗಳಿಂದ ಮುಕ್ತಗೊಳಿಸೋಣ ಎಂದು ಪೊಲೀಸರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ದಕ್ಷಿಣ ವಿಭಾಗದ ಡಿಸಿಪಿ ಡಾ.ಶರಣಪ್ಪ, ಎಸಿಪಿ ಮಹಾಂತರೆಡ್ಡಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News