ಬೆಂಗಳೂರು: ರಸ್ತೆ ಅಪಘಾತಕ್ಕೆ ಯುವಕ ಬಲಿ

Update: 2018-09-01 14:29 GMT

ಬೆಂಗಳೂರು, ಸೆ.1: ಮುಂದೆ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಮತ್ತೊಂದು ಲಾರಿ ಢಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನೆಲಮಂಗಲ ನಿವಾಸಿ ಕಿರಣ್ (23) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ಶನಿವಾರ ಬೆಳಗ್ಗಿನ ಜಾವ 4:45ರ ವೇಳೆಗೆ ಯಶವಂತಪುರದ ಗುರಗುಂಟೆಪಾಳ್ಯದಲ್ಲಿ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಮತ್ತೊಂದು ಲಾರಿ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂದಿನ ಲಾರಿಯಲ್ಲಿದ್ದ ಕಿರಣ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹಿಂದಿನ ಲಾರಿಯ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News