×
Ad

ಸಮರ್ಥ ನಾಯಕರಿಂದ ಉತ್ತಮ ಸಮಾಜ ನಿರ್ಮಾಣ: ರಘುಪತಿ ಭಟ್

Update: 2018-09-01 21:06 IST

ಉಡುಪಿ, ಸೆ.1: ಇಂದು ಸಮಾಜಕ್ಕೆ ನಾಯಕತ್ವದ ಅವಶ್ಯಕತೆ ಬಹಳಷ್ಟಿದೆ. ಸಮರ್ಥ ನಾಯಕರಿಂದ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ. ಹಾಗಾಗಿ ವಿದ್ಯಾರ್ಥಿ ಜೀವನದಲ್ಲೇ ನಾಯಕತ್ವದ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಉಡುಪಿ ಜಿಲ್ಲೆ ಇದರ 2018-19ನೆ ಸಾಲಿನ ಚುನಾವಣೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾ ರಂಭವನ್ನು ಶನಿವಾರ ಅಜ್ಜರಕಾಡು ಪುರಭವನದಲ್ಲಿ ಉದ್ಘಾಟಿಸಿ ಅವರು ಮಾತ ನಾಡುತಿದ್ದರು.

ವಿದ್ಯಾರ್ಥಿ ಸಂಘಗಳಿಂದ ಬಹಳಷ್ಟು ನಾಯಕರು ಮೂಡಿಬರಲು ಸಾಧ್ಯ ವಾಗುತ್ತದೆ. ಮುಂದಿನ ದಿನಗಳಲ್ಲಿ ವಿವಿಧ ರಂಗಗಳಲ್ಲಿ ನಾಯಕರಾಗಿ ಗುರು ತಿಸಿಕೊಳ್ಳುವ ಕಾರ್ಯವನ್ನು ವಿದ್ಯಾರ್ಥಿಗಳು ಮಾಡಬೇಕು. ವಿದ್ಯಾರ್ಥಿ ಸಂಘ ಗಳು ಜನರ ದ್ವನಿಯಾಗಿ ಕೆಲಸ ಮಾಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ಕಾರ್ಮಿಕ ರಕ್ಷಣಾ ವೇದಿಕೆಯ ಅಧ್ಯಕ್ಷ ರವಿ ಶೆಟ್ಟಿ, ಜೆಡಿಎಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಶೆಟ್ಟಿ, ಸಮಾಜ ಸೇವಕ ವಿಶು ಶೆಟ್ಟಿ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮಂಜು ಕೊಳ, ಪ್ರಕಾಶ್ ಶೆಟ್ಟಿ ಬೆಳ್ಳಂಪಳ್ಳಿ ಭಾಗವಹಿಸಿದ್ದರು.

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ ದಿನಕರ ಶೆಟ್ಟಿ, ರಾಜ್ಯಾ ಧ್ಯಕ್ಷ ಅಶ್ವಿತ್ ಕೊಠಾರಿ, ಕಾರ್ಯದರ್ಶಿ ರಘುವೀರ್ ಸೂಟರ್‌ಪೇಟೆ, ಸೂರಜ್ ಇಂದ್ರಾಳಿ ಮೊದಲಾದವರು ಉಪಸ್ಥಿತರಿದ್ದರು. ರಾಮಾಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪರಿಪೂರ್ಣ ಚಂದ್ರಶೇಖರ್ ಸ್ವಾಗತಿಸಿದರು. ಸ್ವಾತಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News