ಬಡಗಬೆಟ್ಟು ಸೊಸೈಟಿಗೆ ಸಾಧನಾ ಪ್ರಶಸ್ತಿ ಪ್ರದಾನ
Update: 2018-09-01 21:13 IST
ಉಡುಪಿ, ಸೆ.1: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಇಂದು ಜರಗಿದ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಸತತವಾಗಿ 12ನೆ ಬಾರಿಗೆ ಸರ್ವತೋಮುಖ ಅಭಿವೃದ್ಧಿಗಾಗಿ ಸಾಧನಾ ಪ್ರಶಸ್ತಿ -2018 ನೀಡಿ ಗೌರವಿಸಲಾಯಿತು.
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್, ಬ್ಯಾಂಕಿನ ಉಪಾಧ್ಯಕ್ಷ ವಿನಯಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ., ಉಡುಪಿ ಜಿಲ್ಲಾ ಸಹಕಾರ ಸಂಘ ಗಳ ಉಪನಿಬಂಧಕರಾದ ಪ್ರವೀಣ್ ಬಿ.ನಾಯಕ್ ಅವರ ಉಪಸ್ಥಿತಿಯಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್, ಸಂಘದ ಉಪಾಧ್ಯಕ್ಷ ಎಲ್.ಉಮಾನಾಥ್, ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.