ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ ಪಿಣರಾಯಿ ವಿಜಯನ್

Update: 2018-09-02 08:40 GMT

ಕೊಚ್ಚಿ, ಸೆ.2: ಚಿಕಿತ್ಸೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ಅಮೆರಿಕಕ್ಕೆ ತೆರಳಿದ್ದಾರೆ. ಆಗಸ್ಟ್ 19ರಂದು ಅವರು ಅಮೆರಿಕಕ್ಕೆ ತೆರಳಲಿದ್ದಾರೆ ಎಂದು ಈ ಮೊದಲು ನಿಗದಿಪಡಿಸಲಾಗಿತ್ತು. ಆದರೆ ಕೇರಳ ಭಾರೀ ಪ್ರವಾಹದ ಹಿನ್ನೆಲೆಯಲ್ಲಿ ದಿನಾಂಕವನ್ನು ಮುಂದೂಡಲಾಗಿತ್ತು.

ವಿಜಯನ್ ಜೊತೆ ಪತ್ನಿ ಕಮಲಾ ವಿಜಯನ್ ಕೂಡ ತೆರಳಿದ್ದು, ಈ ತಿಂಗಳ ಕೊನೆಯಲ್ಲಿ ಹಿಂದಿರುಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News