×
Ad

ಬೆಂಗಳೂರು: 15 ಲಕ್ಷ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

Update: 2018-09-02 22:09 IST

ಬೆಂಗಳೂರು, ಸೆ.2: ಮನೆಯೊಂದರಲ್ಲಿ ವಿವಿಧ ಬಗೆಯ ಮಾದಕ ವಸ್ತುಗಳನ್ನು ಶೇಖರಿಸಿಟ್ಟುಕೊಂಡಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, 15 ಲಕ್ಷ ರೂ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಕಾಮಾಕ್ಷಿಪಾಳ್ಯದ ಮಾರುತಿನಗರದ ನಿವಾಸಿ ಸುರೇಶ್ (47) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಸುರೇಶ್ ತನ್ನ ಪುತ್ರ ಮೋಹಿತ್ ಮೂಲಕ ವಿದೇಶದಿಂದ ವಿವಿಧ ಬಗೆಯ ಮಾದಕ ವಸ್ತುಗಳನ್ನು ಖರೀದಿಸಿ ಮನೆಯಲ್ಲಿ ಶೇಖರಿಸಿಟ್ಟುಕೊಂಡಿದ್ದ. ಪರಿಚಿತ ಯುವಕರಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಎನ್ನುವ ಮಾಹಿತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.

ಹೈಡ್ರೋ ಗಾಂಜಾ 180 ಗ್ರಾಂ, ಎಸ್‌ಡಿ ಬ್ಲಾಟಿಂಗ್ ಪೇಪರ್ 169, ಕೆಂಪು, ಹಳದಿ, ನೀಲಿ ಮತ್ತು ಹಸಿರು ಬಣ್ಣದ ಎಕ್ಸ್‌ಟೆಸಿ ಮಾತ್ರೆ 168, ಹಾಶಿಸ್ 210 ಗ್ರಾಂ, ಒಂದು ಮೊಬೈಲ್ ಸೇರಿದಂತೆ ಒಟ್ಟು 15 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು ತನಿಖೆ ಮುಂದುವರೆದಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News