ಮತ ಎಣಿಕೆ ಕೇಂದ್ರದ ಸುತ್ತ ವಾಹನಗಳ ನಿರ್ಬಂಧ: ಆಯುಕ್ತ ಡಾ.ಸುಬ್ರಮಣ್ಯೇಶ್ವರ ರಾವ್

Update: 2018-09-02 17:31 GMT

ಮೈಸೂರು,ಸೆ.2: ಮೈಸೂರು ಮಹಾನಗರ ಪಾಲಿಕೆಗೆ ಆ.31 ರಂದು ನಡೆದ ಚುನಾವಣೆಯ ಮತ ಎಣಿಕೆ ಸೆ.3 ರ ಸೋಮವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಂಡಿದೆ.

ಮೈಸೂರು ನಗರದ ವಾಲ್ಮೀಕಿ ರಸ್ತೆಯಲ್ಲಿರು ಮಹಾರಾಣಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಕಟ್ಟದಲ್ಲಿ ನಡೆಯಲಿದೆ. ಇದರಿಂದ ಈ ಮಾರ್ಗದ ಎಲ್ಲಾ ವಾಹನಗಳನ್ನು ನಿರ್ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ.ಸುಬ್ರಮಣ್ಯೇಶ್ವರ ರಾವ್ ಆದೇಶಿಸಿದ್ದಾರೆ.

ಈ ಸ್ಥಳದಲ್ಲಿ ಮತ ಎಣಿಕೆ ನಡೆಯುವುದರಿಂದ ಮತ ಎಣಿಕೆ ಕೇಂದ್ರಗಳ ಬಳಿ ಹೆಚ್ಚಿನ ಸಾರ್ವಜನಿಕರು, ವಿವಿಧ ರಾಜಕೀಯ ಪಕ್ಷಗಳ ಬೆಂಬಲಿಗರು ಹಾಗೂ ಮತ ಎಣಿಕೆಯಲ್ಲಿ ತೊಡಗುವ ಅಧಿಕಾರಿಗಳು ಆಗಮಿಸುವ ನಿರೀಕ್ಷೆ ಇರುವ ಹಿನ್ನಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರದ ಹಿತ ದೃಷ್ಟಿಯಿಂದ ಮತ ಎಣಿಕೆ ಕೇಂದ್ರದ ಬಳಿ ಇರುವ ರಸ್ತೆಗಳಲ್ಲಿ ವಾಹನದ ಸಂಚಾರದ ಮೇಲೆ ನಾಳೆ ಬೆಳಿಗ್ಗೆ 6 ಗಂಟೆಯಿಂದ ಮತ ಎಣಿಕೆ ಕಾರ್ಯ ಮುಕ್ತಾಯ ವಾಗುವವರೆಗೂ ನಿರ್ಬಂಧ ವಿಧಿಸಲಾಗಿದೆ.

ಬಿಗಿಭದ್ರತೆ: ಮೈಸೂರು ಮಹಾನಗರ ಪಾಲಿಕೆಯ 65 ವಾರ್ಡ್‍ಗಳಿಗೆ ನಡೆದ ಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು, ನಗರಾದ್ಯಂತ ಪೊಲೀಸರು ಬಿಗಿಭದ್ರತೆ ಒದಗಿಸಿದ್ದಾರೆ. ಯಾವುದೇ ರೀತಿ ಅಹಿತಕರ ಘಟನೆಗೆ ಅವಕಾಶನೀಡಬಾರದು ಎಂಬ ಉದ್ದೇಶದಿಂದ ಸಶಸ್ತ್ರ ಮೀಸಲು ಪಡೆ ಪೊಲೀಸರು ಆಯ ಕಟ್ಟಿನ ಸೂಕ್ಷ್ಮ ಪ್ರದೇಶಗಳಲ್ಲಿ ಮೊಕ್ಕಾಂ ಹೂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News