ಮದುವೆಯಾಗುವುದಾಗಿ ನಂಬಿಸಿ ಮಹಿಳೆಯ ಅತ್ಯಾಚಾರ: ನೌಕಾಪಡೆ ಅಧಿಕಾರಿಯ ಬಂಧನ

Update: 2018-09-03 05:51 GMT

ಕೊಟ್ಟಾಯಂ, ಸೆ.3: ಸ್ಥಳೀಯ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ನೌಕಾಪಡೆ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

"ನೌಕಾಪಡೆ ಅಧಿಕಾರಿಯೊಬ್ಬರು ನನ್ನ ಮಗಳನ್ನು ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ" ಎಂದು ಸಂತ್ರಸ್ತೆಯ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ನೌಕಾಪಡೆಯಲ್ಲಿ ಮುಂಬೈನಲ್ಲಿ ಪೆಟ್ಟಿ ಆಫೀಸರ್ ಆಗಿರುವ ಮುರಳಿ ಕುಮಾರ್ ಬಂಧಿತ ಅಧಿಕಾರಿ. ಅಧಿಕಾರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿ ಅಧಿಕಾರಿ ವಿರುದ್ಧ ಎಸ್ಸಿ/ಎಸ್ಟಿ ದೌರ್ಜನ್ಯ (ತಡೆ) ಕಾಯ್ದೆ ಅನ್ವಯವೂ ಪ್ರಕರಣ ದಾಖಲಾಗಿದೆ. ಕಳೆದ ವಾರ ಕೊಟ್ಟಾಯಂನಲ್ಲಿ ಅಧಿಕಾರಿಯನ್ನು ಭೇಟಿ ಮಾಡಲು ಹೋಟೆಲ್‍ಗೆ ಹೋಗಿದ್ದಾಗ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಯುವತಿ ಆಪಾದಿಸಿದ್ದಾಳೆ.

ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಬಾರಿ ಮಿಸ್ಟರ್ ಏಷ್ಯಾ ಪ್ರಶಸ್ತಿ ಹಾಗೂ ಎಂಟು ಬಾರಿ ಮಿಸ್ಟರ್ ಇಂಡಿಯಾ ಪ್ರಶಸ್ತಿ ಗೆದ್ದಿದ್ದ ಈ ಅಧಿಕಾರಿ ಸಾಮಾಜಿಕ ಜಾಲತಾಣದ ಮೂಲಕ ಯುವತಿಯ ಸ್ನೇಹ ಸಂಪಾದಿಸಿದ್ದ. ಘಟನೆ ಬಗ್ಗೆ ನೌಕಾಪಡೆ ಹಿರಿಯ ಅಧಿಕಾರಿಗಳಿಗೆ ವರದಿ ನೀಡುವುದಾಗಿ ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News