ಬೆಳ್ತಂಗಡಿ: ಯಾಕೂಬ್‍ಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Update: 2018-09-03 18:05 GMT

ಬೆಳ್ತಂಗಡಿ, ಸೆ. 3: ತಾಲೂಕು ನಡ ಸರಕಾರಿ ಪ್ರೌಢಶಾಲೆಯ ಗಣಿತ ಶಿಕ್ಷಕ ಯಾಕೂಬ್ ಕೊಯ್ಯೂರು ಅವರು 2018ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕಳೆದ 23 ವರ್ಷಗಳಿಂದ ನಡ ಶಾಲೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯದಲ್ಲಿ 5 ವರ್ಷಗಳ ಕಾಲ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಇಡೀ ರಾಜ್ಯಕ್ಕೆ ಮಾದರಿಯಾದ ಗಣಿತ ಪ್ರಯೋಗಾಲಯವನ್ನು ನಡ ಶಾಲೆಯಲ್ಲಿ ಸ್ಥಾಪಿಸಿ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.

ಯೂಟ್ಯೂಬ್‍ನಲ್ಲಿ ಇವರ ಬೋಧನೆಯ ಸುಮಾರು 150ಕ್ಕೂ ಅಧಿಕ ವಿಡಿಯೋಗಳಿದ್ದು, ಪ್ರಸ್ತುತ ಅದನ್ನು ಮಾನವ ಸಂಪನ್ಮೂಲ ಇಲಾಖೆ ತನ್ನ ದೀಕ್ಷಾ  ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡುತ್ತಿದೆ. 9 ಹಾಗೂ 10ನೇ ತರಗತಿಗಳಿಗೆ ಸಂಬಂಧಿಸಿ, 4000ಕ್ಕೂ ಅಧಿಕ ಪುಟ ನೋಟ್ಸ್ ಗಳನ್ನು ಇವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಪ್ರಸ್ತುತ ಅದನ್ನು ಸಾವಿರಾರು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಇವರು ದ.ಕ.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಶ್ರೀನಿವಾಸ ಶಿಕ್ಷಣ ಸಂಸ್ಥೆಯಿಂದ ಅವಿಭಜಿತ ದ.ಕ.ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ, ಯೆನೆಪೊಯ ಶಿಕ್ಷಣ ಸಂಸ್ಥೆಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News