ಮಿತಿಮೀರಿದ ತೆರಿಗೆ ತೈಲ ಬೆಲೆ ಏರಿಕೆಗೆ ಕಾರಣ: ಚಿದಂಬರಂ

Update: 2018-09-04 13:48 GMT

ಹೊಸದಿಲ್ಲಿ, ಸೆ.4: ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರುತ್ತಿರುವುದಕ್ಕೆ ಎನ್‌ಡಿಎ ಸರಕಾರವನ್ನು ಟೀಕಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ, ಮಿತಿಮೀರಿದ ತೆರಿಗೆ ಇದಕ್ಕೆ ಕಾರಣವಾಗಿದೆ ಎಂದಿದ್ದಾರೆ.

ತಕ್ಷಣ ಪೆಟ್ರೋಲ್ ಮತ್ತು ಡೀಸೆಲನ್ನು ಜಿಎಸ್‌ಟಿ ವ್ಯಾಪ್ತಿಗೆ ತರಬೇಕು ಎಂದು ಒತ್ತಾಯಿಸಿದ ಅವರು, ಕೇಂದ್ರ ಸರಕಾರವು ರಾಜ್ಯ ಸರಕಾರವನ್ನು ದೂರುತ್ತಿರುವುದು ಸರಿಯಲ್ಲ ಎಂದರು.

19 ರಾಜ್ಯಗಳಲ್ಲಿ ಬಿಜೆಪಿ ಆಡಳಿತವಿದೆ ಎಂಬುದನ್ನು ಅವರು ಬಹುಷಃ ಮರೆತಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆಯನ್ನು ಜಿಎಸ್‌ಟಿಯಡಿ ತರಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಜತೆಗೂಡಿ ನಿರ್ಧರಿಸಬೇಕಿದೆ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ. ಸೋಮವಾರ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಟ ಮೊತ್ತಕ್ಕೆ ತಲುಪಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News