ಸತತ 10ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ

Update: 2018-09-04 13:52 GMT

ಮುಂಬೈ, ಸೆ.4: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸತತ 10ನೇ ದಿನವೂ ಮುಂದುವರಿದಿದ್ದು ಮಂಗಳವಾರ ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 31 ಪೈಸೆ, ಡೀಸೆಲ್ ಬೆಲೆ ಲೀಟರ್‌ಗೆ 19 ಪೈಸೆ ಹೆಚ್ಚಳವಾಗಿದೆ.

ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 79.31 ರೂ., ಡೀಸೆಲ್ ಬೆಲೆ ಲೀಟರ್‌ಗೆ 71.34 ರೂ. ತಲುಪಿದ್ದರೆ ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 86.72 ರೂ, ಡೀಸೆಲ್ ಲೀಟರ್‌ಗೆ 75.74 ರೂ.ಗೆ ಏರಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಇತರ ವಸ್ತುಗಳ ಬೆಲೆಯೂ ಏರುತ್ತಿದೆ. ಕೇಂದ್ರ ಸರಕಾರ ತಕ್ಷಣ ಮಧ್ಯಪ್ರವೇಶಿಸಿ ತೈಲ ಬೆಲೆಯನ್ನು ನಿಯಂತ್ರಿಸಬೇಕು ಎಂದು ಗ್ರಾಹಕರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News