ಅಡಿಕೆ ಕೊಳೆರೋಗ: ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆ

Update: 2018-09-04 15:05 GMT

ಬಂಟ್ವಾಳ, ಸೆ. 4: ಅಡಿಕೆ ಕೊಳೆರೋಗದಿಂದ ಕಂಗಾಲಾದ ತಾಲೂಕಿನ ರೈತರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೊಳೆರೋಗದ ಅಡಿಕೆಗಳನ್ನು ಬಂಟ್ವಾಳ ತಾಲೂಕು ತಹಶೀಲ್ದಾರರ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಿ ಮಂಗಳವಾರವಿನೂತ ಪ್ರತಿಭಟನೆ ನಡೆಯಿತು.

ಬಂಟ್ವಾಳ ತಾಲೂಕಿನ ಅಡಿಕೆ ಬೆಳೆಗಾರರ ಒಕ್ಕೂಟ ಹಾಗೂ ರೈತ ಸಂಘ, ಹಸಿರು ಸೇನೆ ಇದರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಪ್ರತಿಭಟನೆಯಲ್ಲಿರಾಜ್ಯ ಸರಕಾರ ವಿರುದ್ಧ ಘೋಷಣೆ ಕೂಗಿದರು.

ಅಡಿಕೆ ಕೊಳೆರೋಗದಿಂದ ನಷ್ಟ ಅನುಭವಿಸಿದ ರೈತರ ತೋಟಗಳ ಸರ್ವೇ ನಡೆಸುವಂತೆ ಸರಕಾರ ಆದೇಶ ಮಾಡಿದರೂ ಕೂಡಾ, ತಾಲೂಕಿನ ತಹಶೀಲ್ದಾರರು ಮಾತ್ರ ತನಗೆ ಆದೇಶ ಬಂದಿಲ್ಲ ಎಂದು ಹೇಳಿ ರೈತರಿಗೆ ಅವಮಾನ ಮಾಡಿದ್ದಾರೆ ಎಂದು ರೈತರು ಆರೋಪಿಸಿದರು. ಅಡಿಕೆ ಕೊಳೆ ರೋಗದಿಂದ ನಷ್ಟ ಅನುಭವಿಸಿ ಕಂಗೆಟ್ಟ ತಾಲೂಕಿನ ರೈತರಿಗೆ ಎಕರೆಗೆ ಎರಡು ಲಕ್ಷ ರೂ. ಪರಿಹಾರ ನೀಡುವಂತೆ ಇದೇ ಸಣದರ್ಭದಲ್ಲಿ ಒತ್ತಾಯಿಸಲಾಯಿತು.

ಈ ಪ್ರತಿಭಟನೆಯಲ್ಲಿ ಜಿಪಂ ಸದಸ್ಯ ತುಂಗಪ್ಪ ಬಂಗೇರ, ರೈತ ಸಂಘ ಹಸಿರು ಸೇನೆ ಜಿಲ್ಲಾ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳ ಗುತ್ತು, ಜಿಲ್ಲಾದ್ಯಕ್ಷ ಶ್ರೀಧರ ಶೆಟ್ಟಿ ಬೈಲು ಗುತ್ತು, ರೈತ ಸಂಘದ ತಾಲೂಕು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್, ಒಕ್ಕೂಟ ಸದಸ್ಯ ಸಂಜೀವ ಪೂಜಾರಿ ಪಂಜಿಕಲ್ಲು, ಹರಿಕೃಷ್ಣ ಬಂಟ್ವಾಳ ಮತ್ತಿತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News