×
Ad

ಸೆ.8ರಂದು ಉಡುಪಿ ಗ್ರಾಪಂ ನೌಕರರ ಜಿಲ್ಲಾಮಟ್ಟದ ಸಮಾವೇಶ

Update: 2018-09-04 20:39 IST

ಉಡುಪಿ, ಸೆ.4: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ(ಆರ್‌ಡಿಪಿಆರ್) ಉಡುಪಿ ಜಿಲ್ಲಾ ಸಮಿತಿಯ ವತಿ ಯಿಂದ ಅಭಿನಂದನಾ ಕಾರ್ಯಕ್ರಮ ಹಾಗೂ ಗ್ರಾಪಂ ನೌಕರರ ಜಿಲ್ಲಾ ಮಟ್ಟದ ಸಮಾವೇಶವನ್ನು ಸೆ.8ರಂದು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

 ಸಮಾವೇಶವನ್ನು ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಉದ್ಘಾಟಿಸಲಿರುವರು. ಈ ಸಂದರ್ಭದಲ್ಲಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಉಪಾಧ್ಯಕ್ಷರು, ತಾಪಂ ಅಧ್ಯಕ್ಷರುಗಳು, ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳನ್ನು ಅಭಿನಂದಿಸಲಾಗುವುದೆಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಕುಲಾಲ್ ಮುದ್ರಾಡಿ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಪಂಚಾಯತ್‌ರಾಜ್ ಇಲಾಖೆಯ ಸ್ಥಳೀಯಾಡಳಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಪಂ ನೌಕರರನ್ನು ಗ್ರೂಪ್ ಸಿ ಮತ್ತು ಡಿ ಹುದ್ದೆಗೆ ಮೇಲ್ದರ್ಜೆಗೇರಿಸಬೇಕೆಂದು ಆಗ್ರಹಿಸಿ ಸಂಘದಿಂದ ಈಗಾಗಲೇ ಗ್ರಾಮೀಣಾಭಿ ವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೃಷ್ಣಬೈರೇಗೌಡ ಅವರಿಗೆ ಮನವಿ ಯನ್ನು ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಉದಯ ಶೆಟ್ಟಿ ಪೆರ್ಡೂರು, ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಸೇರಿಗಾರ್ ಅಲೆವೂರು, ಕೋಶಾಧಿಕಾರಿ ಸಚಿನ್ ಪೂಜಾರಿ ಮಣಿಪುರ, ಉಡುಪಿ ತಾಲೂಕು ಅಧ್ಯಕ್ಷ ಅರವಿಂದ ಎಸ್. ಉಪಸ್ಥಿತ ರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News