ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಆಮಂತ್ರಣ ಪತ್ರಿಕೆ ಬಿಡುಗಡೆ
Update: 2018-09-04 21:32 IST
ಮಂಗಳೂರು, ಸೆ. 4: ದೇರಳಕಟ್ಟೆ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೆ.15ರಂದು ನಡೆಯಲಿರುವ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ದ.ಕ. ಜಿಲ್ಲಾ ಕಸಾಪ ಅಧ್ಯಕ್ಷ ಎಸ್. ಪ್ರದೀಪಕುಮಾರ ಕಲ್ಕೂರ ಬಿಡುಗಡೆಗೊಳಿಸಿದರು.
ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ, ವಿದ್ಯಾರತ್ನ ವಿದ್ಯಾಸಂಸ್ಥೆಯ ಮುಖ್ಯಸ್ಥ ರವೀಂದ್ರ ಶೆಟ್ಟಿ ಉಳಿದೊಟ್ಟು ಹಾಗೂ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಬಿ.ತಮ್ಮಯ್ಯ ಮುಖ್ಯಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕಸಾಪ ಮಂಗಳೂರು ತಾಲೂಕು ಘಟಕದ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ.ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಿದ ಸಮಾರಂಭದಲ್ಲಿ ಸದಸ್ಯರಾದ ಅರುಣಾ ನಾಗರಾಜ್, ಮೋಲಿ ಮಿರಾಂದ, ದಯಾಮಣಿ ವಿ. ಕೋಟ್ಯಾನ್, ಸುನೀತಾ ಆರ್. ಶೆಟ್ಟಿ, ರಘು ಇಡ್ಕಿದು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕಾರ್ಯದರ್ಶಿ ಡಾ. ಪದ್ಮನಾಭ ಭಟ್‌ಎಕ್ಕಾರು ಸ್ವಾಗತಿಸಿದರು. ದೇವಕಿ ಅಚ್ಯುತ್‌ವಂದಿಸಿದರು.