ಹೋರ್ಡಿಂಗ್ಸ್ ತೆರವು ಯಾರಿಗೆ ಅನ್ವಯ ಎಂಬುದನ್ನು ಸ್ಪಷ್ಟಪಡಿಸಲು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ

Update: 2018-09-04 16:33 GMT

ಬೆಂಗಳೂರು, ಸೆ.4: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ಸ್ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಹೋರ್ಡಿಂಗ್ಸ್ ತೆರವು ಅಕ್ರಮ ಜಾಹೀರಾತುದಾರರಿಗಾ ಅಥವಾ ಕಾನೂನು ಪ್ರಕಾರ ಅನುಮತಿ ಪಡೆದಿರುವವರಿಗಾ ಎಂಬುದನ್ನು ಸ್ಪಷ್ಟಪಡಿಸಲು ಹೈಕೋರ್ಟ್ ಬಿಬಿಎಂಪಿ ಪರ ವಕೀಲರಿಗೆ ಸೂಚನೆ. 

ವಿವಿಧ ಜಾಹೀರಾತು ಕಂಪೆನಿಗಳಿಂದ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಈ ಸೂಚನೆ ನೀಡಿತು. ಅರ್ಜಿದಾರರ ಪರ ವಾದಿಸಿದ ವಕೀಲರು, ಅರ್ಜಿದಾರ ಕಂಪೆನಿಗಳು ಕಾನೂನು ಪ್ರಕಾರ ಅನುಮತಿ ಪಡೆದು ಜಾಹೀರಾತುಗಳನ್ನು ಅಳವಡಿಸಿದ್ದಾರೆ. ಆದರೆ, ಬಿಬಿಎಂಪಿ ಹೊಸ ನಿಯಮಗಳನ್ನು ಜಾರಿಗೆ ತಂದು ಜಾಹೀರಾತುಗಳನ್ನು ತೆರವುಗೊಳಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಹೀಗಾಗಿ, ಬಿಬಿಎಂಪಿ ಯಾವ ರೀತಿಯಾಗಿ ಜಾಹೀರಾತು ತೆರವು ಬಗ್ಗೆ ಕ್ರಮ ಕೈಗೊಳ್ಳುತ್ತದೆ ಎಂಬುದರ ಬಗ್ಗೆ ಮಾಹಿತಿ ನೀಡಲು ಸೂಚಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಹೋರ್ಡಿಂಗ್ಸ್ ತೆರವು ವಿಚಾರದಲ್ಲಿ ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತೀರಿ ಎಂಬುದರ ಬಗ್ಗೆ ಮಾಹಿತಿ ನೀಡಿ ಎಂದು ಬಿಬಿಎಂಪಿಗೆ ಸೂಚನೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News