×
Ad

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೈಸೂರು ವಿವಿ ಸ್ವಚ್ಛತಾ ಕಾರ್ಮಿಕರ ಅಹೋರಾತ್ರಿ ಧರಣಿ

Update: 2018-09-04 22:39 IST

ಮೈಸೂರು,ಸೆ.4: ಮೈಸೂರು ವಿವಿಯ ಸ್ವಚ್ಛತಾ ಕಾರ್ಮಿಕರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಅನಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಪುತ್ಥಳಿ ಮುಂದೆ ಪ್ರತಿಭಟನೆ ಕೈಗೊಂಡ ನೂರಾರು ಮಹಿಳಾ ಸ್ವಚ್ಛತಾ ಕಾರ್ಮಿಕರು ಎರಡು ತಿಂಗಳಿಂದ ವೇತನ ನೀಡದೆ ಹಾಗೂ ಇಎಸ್‍ಐ, ಫಿಎಫ್ ವ್ಯವಸ್ಥೆ ಕಲ್ಪಿಸಲಿಲ್ಲ ಎಂದು ಅಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಳೆದ 14ವರ್ಷಗಳಿಂದ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಕಾರ್ಮಿಕರನ್ನು ಖಾಯಂ ಗೊಳಿಸುವಂತೆ ಆಗ್ರಹಿಸಿದರು. ಮೈಸೂರು ವಿವಿಯು ಪುರುಷ ಕಾರ್ಮಿಕರಿಗೆ ಮಾತ್ರ ಸಂಬಳ ಜಾಸ್ತಿ ಮಾಡಿ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದರಲ್ಲದೇ, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News