ಏಶ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರಕಾರದಿಂದ ಸತ್ಕಾರ

Update: 2018-09-04 18:25 GMT

ಹೊಸದಿಲ್ಲಿ, ಸೆ.4: ಏಶ್ಯನ್ ಗೇಮ್ಸ್ ಇತಿಹಾಸದಲ್ಲಿ ಗರಿಷ್ಠ ಪದಕಗಳನ್ನು ಗೆದ್ದುಕೊಂಡಿರುವ ಭಾರತದ ಅಥ್ಲೀಟ್‌ಗಳಿಗೆ ಕೇಂದ್ರ ಸರಕಾರ ಮಂಗಳವಾರ ನಗದು ಬಹುಮಾನ ನೀಡಿ ಸತ್ಕರಿಸಿದೆ. ವೈಯಕ್ತಿಕ ವಿಭಾಗದಲ್ಲಿ ಚಿನ್ನ ಗೆದ್ದವರಿಗೆ 40 ಲಕ್ಷ ರೂ., ಬೆಳ್ಳಿ ಹಾಗೂ ಕಂಚು ಜಯಿಸಿದವರಿಗೆ ಕ್ರಮವಾಗಿ 20 ಹಾಗೂ 10 ಲಕ್ಷ ರೂ. ಬಹುಮಾನ ವಿತರಿಸಲಾಯಿತು.

ಕೇಂದ್ರ ಗೃಹ ಸಚಿವ ರಾಜ್‌ನಾಥ್ ಸಿಂಗ್ ಹಾಗೂ ಕ್ರೀಡಾ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋಡ್, ಐಒಎ ಅಧ್ಯಕ್ಷ ನರೇಂದ್ರ ಬಾತ್ರಾ ಹಾಗೂ ಸಾಯ್ ಡಿಜಿ ನೀಲಮ್ ಕಪೂರ್ ಮೊದಲಾದವರು ಉಪಸ್ಥಿತರಿದ್ದರು.

ಈ ಬಾರಿಯ ಏಶ್ಯನ್ ಗೇಮ್ಸ್‌ನಲ್ಲಿ ಭಾರತ 15 ಚಿನ್ನ, 24 ಬೆಳ್ಳಿ ಹಾಗೂ 30 ಕಂಚು ಸಹಿತ ಒಟ್ಟು 69 ಪದಕಗಳನ್ನು ಜಯಿಸಿ ಹೊಸ ದಾಖಲೆ ನಿರ್ಮಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News