ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯ: ನಳಿನ್ ಕುಮಾರ್

Update: 2018-09-05 11:24 GMT

ಮಂಗಳೂರು, ಸೆ. 5: ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮುಖ್ಯ ಎಂದು ಸಂಸದ ನಳಿನ್ ಕುಮಾರ್ ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ ವಲಯ ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ ಶಿಕ್ಷಕರ ದಿನಾಚರಣೆ ಸಮಿತಿ ಸರಕಾರದಲ್ಲಿ ಶಿಕ್ಷಕರ ದಿನ ಪ್ರಯುಕ್ತ ಬುಧವಾರ ಜಪ್ಪಿನಮೊಗರು ಪ್ರೆಸ್ಟೀಜ್ ಶಾಲಾ ಸಭಾಂಗಣದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಕರಿಗೆ ಸಮಾಜದಲ್ಲಿ ಉನ್ನತ ಸ್ಥಾನ ಮಾನ ನೀಡಲಾಗಿದೆ. ಶಿಕ್ಷಕರು ವ್ಯಕ್ತಿಯ ವ್ಯಕ್ತಿ ತ್ವವನ್ನು ರೂಪಿಸುವವರು, ವ್ಯಕ್ತಿ ಮಾಡುವ ತಪ್ಪಿಗೆ ಸಮಾಜ ಶಿಕ್ಷಕರತ್ತ ಕೈ ತೋರಿಸುತ್ತದೆ. ಮಕ್ಕಳು ಶಿಕ್ಷಕರ ನಡೆ, ನುಡಿ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೆ. ಅಲ್ಲದೆ ದೇಶ ಕಟ್ಟುವ ಕಾರ್ಯದಲ್ಲಿ ಶಿಕ್ಷಕರ ಸೇವೆ ಅಗತ್ಯ. ಶಿಕ್ಷಕರದ್ದು ಕೇವಲ ಪಾಠ ಮಾಡುವ ಕೆಲಸವಲ್ಲ, ಸಮಾಜ ಕಟ್ಟುವ ಜವಾಬ್ದಾರಿ ಇದು ವೃತ್ತಿಯಲ್ಲ, ಸೇವೆಯಾಗಿದೆ ಎಂದು ನಳಿನ್ ಕುಮಾರ್  ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅತ್ತಾವರ ಪ್ರಾಥಮಿಕ ಶಾಲೆಯ ಶಿಕ್ಷಕಿ ಹೇಮಾವತಿ , ವಾಮಂಜೂರು ಮಂಗಳಾ ಜ್ಯೋತಿ ಶಾಲೆಯ ಅಶೋಕ್ ಕುಮಾರ್ ಶೆಟ್ಟಿ, ನಿಕಟಪೂರ್ವ ದೈಹಿಕ ಶಿಕ್ಷಣಾಧಿಕಾರಿ ಗುರುನಾಥ ಬಾಗೇವಾಡಿ ಸಹಿತ 55 ಸಾಧಕ ಶಿಕ್ಷಕರನ್ನು ಸನ್ಮಾನಿಸಲಾಯಿತು. ಮಂಗಳೂರು ವಿವಿ ಪ್ರಾಧ್ಯಾಪಕ ಧನಂಜಯ ಕುಂಬ್ಳೆ ದಿಕ್ಸೂಚಿ ಭಾಷಣ ಮಾಡಿದರು.

ವಿದಾನ ಪರಿಷತ್ ಸದಸ್ಯ ಐವನ್ ಡಿಸೋಜ, ತಾಲೂಕು ಪಂಚಾಯತಿ ಅಧ್ಯಕ್ಷ ಮೊಹಮ್ಮದ್ ಮೋನು, ಜಿಲ್ಲಾ ಪಂಚಾಯತ್ ಸದಸ್ಯೆ ಧನಲಕ್ಷ್ಮೀ ಗಟ್ಟಿ, ಮನಪಾ ಸದಸ್ಯ ಸುರೇಂದ್ರ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಂ.ಕೆ.ಮಂಜನಾಡಿ, ವಿದ್ಯಾರತ್ನ ಶಾಲೆ ನಿರ್ದೇಶಕ ಕೆ‌.ರವೀಂದ್ರ ಶೆಟ್ಟಿ ಉಳಿದೊಟ್ಟು, ದಕ್ಷಿಣ ವಲಯ ಪರಿವೀಕ್ಷಣಾಧಿಕಾರಿ ವಿಷ್ಣು ಹೆಬ್ಬಾರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ತುಳಸೀ, ಜಗದೀಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್ ಸ್ವಾಗತಿಸಿದರು. ಎಂ.ಎಚ್.ಮಲಾರ್, ರಾಧಾಕೃಷ್ಣ ರಾವ್, ತ್ಯಾಗಂ ಹರೇಕಳ,  ಸನ್ಮಾನಿತರ ಪತ್ರ ವಾಚಿಸಿದರು. ದಕ್ಷಿಣ ವಲಯ ಶಿಕ್ಷಣ ಸಮನ್ವಯಾಧಿಕಾರಿ ಡಾ.ಪ್ರಶಾಂತ್ ಕುಮಾರ್ ಕೆ.ಎಸ್. ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News