ದುಬೈ ವಿಮಾನದಲ್ಲಿ 10 ಪ್ರಯಾಣಿಕರು ಅಸ್ವಸ್ತ

Update: 2018-09-05 14:51 GMT

ನ್ಯೂಯಾರ್ಕ್, ಸೆ.5: ದುಬೈನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ವಿಮಾನದಲ್ಲಿದ್ದ 10 ಪ್ರಯಾಣಿಕರು ಅಸ್ವಸ್ಥರಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

500 ಪ್ರಯಾಣಿಕರನ್ನು ಒಳಗೊಂಡ ಎಮಿರೇಟ್ಸ್ ವಿಮಾನ EK203 ಬುಧವಾರ ಜಾನ್ ಕೆನಡಿ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು. ಕೂಡಲೇ ಅಸ್ವಸ್ಥ ಪ್ರಯಾಣಿಕರಿಗೆ ವೈದ್ಯಕೀಯ ನೆರವು ನೀಡಲಾಯಿತು.

“ಸ್ಥಳಿಯ ವೈದ್ಯಕೀಯ ಸಿಬ್ಬಂದಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದರು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದವರಿಗೆ ಚಿಕಿತ್ಸೆ ನೀಡಲಾಗುವುದು” ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.

ಪ್ರಯಾಣಿಕರು ಅಸ್ವಸ್ತಗೊಳ್ಳಲು ಕಾರಣ ಇನ್ನೂ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News