ಉಡುಪಿ: ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಆರ್ಥಿಕ ನೆರವಿಗೆ ಅರ್ಜಿ ಆಹ್ವಾನ

Update: 2018-09-05 15:53 GMT

ಉಡುಪಿ, ಸೆ.5: 2018-19ನೇ ಸಾಲಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಉದ್ಯಮಶೀಲತಾ ಅಭಿವೃದ್ದಿ ಯೋಜನೆಯಡಿ 1 ಲಕ್ಷ ರೂ.ನಿಂದ 20 ಲಕ್ಷ ರೂ. ಗಳ ಘಟಕ ವೆಚ್ಚದ ವಿವಿಧ ಉದ್ದೇಶಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಹಾಗೂ ಮೈಕ್ರೋಕ್ರೆಡಿಟ್ ಕಿರುಸಾಲ ಯೋಜನೆಗಳಡಿ ಸ್ವ-ಸಹಾಯ ಗುಂಪುಗಳಲ್ಲಿ ಸದಸ್ಯರಾಗಿರುವ ಪರಿಶಿಷ್ಟ ಪಂಗಡದ ಮಹಿಳಾ ಪಲಾಪೇಕ್ಷಿಗಳಿಗೆ ನಿಗಮದಿಂದ ಆರ್ಥಿಕ ನೆರವು ಪಡೆಯಲು ಅವಕಾಶವಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅರ್ಜಿದಾರರು ಅರ್ಜಿಯೊಂದಿಗೆ ಪಾಸ್‌ಪೋರ್ಟ್ ಸೈಜಿನ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ, ಪಡಿತರ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಉಳಿತಾಯ ಖಾತೆಯ ಪ್ರತಿ, ಯೋಜನಾ ವರದಿ/ ದರಪಟ್ಟಿ (ಅನ್ವಯವಾಗುವ ಘಟಕಗಳಿಗೆ) ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಅ.10ರೊಳಗೆ ಖುದ್ದು ಅಥವಾ ಅಂಚೆಯ ಮೂಲಕ ಜಿಲ್ಲಾ ಕಛೇರಿಗೆ ಸಲ್ಲಿಬೇಕು.

ಅರ್ಜಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಕಛೇರಿಗಳ ಸಂಕೀರ್ಣ, ರಜತಾದ್ರಿ ಮಣಿಪಾಲ ಇವರಿಂದ ಉಚಿತವಾಗಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News