ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿ: ಸಿಟ್

Update: 2018-09-05 16:59 GMT

ಬೆಂಗಳೂರು, ಸೆ. 5: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ. ಎರಡು ತಿಂಗಳಲ್ಲಿ ಆರೋಪ ಪಟ್ಟಿ ಸಲ್ಲಿಸಲಾಗುವುದು ಎಂದು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಸಿಟ್)ದ ಹಿರಿಯ ಅಧಿಕಾರಿ ಬುಧವಾರ ತಿಳಿಸಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚುವರಿ ಪೊಲೀಸ್ ಆಯುಕ್ತ (ಪಶ್ಚಿಮ) ಬಿ.ಕೆ. ಸಿಂಗ್ ನೇತೃತ್ವದ ವಿಶೇಷ ತನಿಖಾ ತಂಡ (ಸಿಟ್) 12 ಜನರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಬಂಧಿತರಾದವರಲ್ಲಿ ಕೆಲವರು ಸನಾತನ ಸಂಸ್ಥೆ ಹಾಗೂ ಅದರ ಸಹ ಸಂಸ್ಥೆ ಹಿಂದೂ ಜನಜಾಗೃತಿ ಸಮಿತಿಯೊಂದಿಗೆ ನಂಟು ಇರಿಸಿಕೊಂಡಿದ್ದಾರೆ. ‘‘ಪ್ರಕರಣದ ತನಿಖೆ ಅಂತಿಮ ಹಂತದಲ್ಲಿ ಇದೆ. ಎರಡು ತಿಂಗಳಲ್ಲಿ ನಾವು ಆರೋಪ ಪಟ್ಟಿ ಸಲ್ಲಿಸಲಿದ್ದೇವೆ.’’ ಎಂದು ತನಿಖಾಧಿಕಾರಿ ಎಂ.ಎನ್. ಅನುಚೇತ್ ತಿಳಿಸಿದ್ದಾರೆ. ಗೌರಿ ಲಂಕೇಶ್ ಅವರನ್ನು ರಾಜರಾಜೇಶ್ವರಿ ನಗರದಲ್ಲಿರುವ ಅವರ ಮನೆಯ ಎದುರು 2017 ಸೆಪ್ಟಂಬರ್ 5ರಂದು ರಾತ್ರಿ 8 ಗಂಟೆಗೆ ಗುಂಡು ಹಾರಿಸಿ ಹತ್ಯೆಗೈಯಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News