ತುಮಕೂರು: ನಿಂತಿದ್ದ ಲಾರಿಗೆ ಕ್ಯಾಂಟರ್ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

Update: 2018-09-06 05:47 GMT

ತುಮಕೂರು, ಸೆ. 6: ಇಲ್ಲಿನ ಶಿರಾ ಬಳಿ ಹತ್ತು ಚಕ್ರದ ಲಾರಿಯೊಂದಕ್ಕೆ ಹಿಂದಿನಿಂದ ಬಂದ ಕ್ಯಾಂಟರ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಗಂಭೀರ ಗಾಯಗೊಂಡ ಯುವಕನನ್ನು ಶಿರಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ತೆರಳಿದ ಅಗ್ನಿ ಶಾಮಕ ದಳದ ಎಸ್.ಐ. ಹನುಮಂತರಾಯಪ್ಪ ಮತ್ತು ಸಿಬ್ಬಂದಿ‌ ವರ್ಗ ಹರಸಾಸಪಟ್ಟು ಮೃತದೇಹವನ್ನು ಹೊರತೆಗೆದರು.

ಈ ಬಗ್ಗೆ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದುಬರಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News