ಶಿಕ್ಷಕರ ದಿನಾಚರಣೆಯ ಮರುದಿನ ಶಾಲೆಯಲ್ಲೇ ನೇಣಿಗೆ ಶರಣಾದ ಶಿಕ್ಷಕ

Update: 2018-09-06 06:12 GMT

ಹುಬ್ಬಳ್ಳಿ, ಸೆ. 6: ಶಿಕ್ಷಕರ ದಿನಾಚರಣೆಯ ಮರುದಿನವೇ ಶಿಕ್ಷಕನೊಬ್ಬ ಶಾಲೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಕೊಳಿವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

ಚನ್ನಪ್ಪ ತೊಟಗಂಟಿ (42) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ ಎಂದು ಗುರುತಿಸಲಾಗಿದೆ.

ಕೊಪ್ಪಳ ಮೂಲದ ಈ ಶಿಕ್ಷಕ ಕಳೆದು ಹತ್ತು ವರ್ಷಗಳಿಂದ ಇದೇ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಾಲೆಯಲ್ಲಿ ಮಕ್ಕಳು ಕಡಿಮೆ ಇದ್ದಾರೆ ಎಂಬ ಕಾರಣಕ್ಕೆ ಈ ಶಿಕ್ಷಕನನ್ನು ಬೇರೆ ಕಡೆಗೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಮಾಡಿತ್ತು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅಂದಾಜಿಸಲಾಗಿದೆ.

ಈ ಬಗ್ಗೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News