ಎಸ್‌ಸಿ, ಎಸ್‌ಟಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ಮಧ್ಯಪ್ರದೇಶದಲ್ಲಿ ‘ಭಾರತ್ ಬಂದ್’

Update: 2018-09-06 08:50 GMT

ಭೋಪಾಲ್, ಸೆ.6: ಎಸ್‌ಸಿ ಹಾಗೂ ಎಸ್ಟಿ ದೌರ್ಜನ್ಯ ಕಾಯ್ದೆಯಲ್ಲಿ ತಿದ್ದುಪಡಿ ತರಲು ಉದ್ದೇಶಿಸಿರುವ ಕೇಂದ್ರ ಸರಕಾರದ ಕ್ರಮವನ್ನು ವಿರೋಧಿಸಿ ಮೇಲ್ವರ್ಗದ ಸಂಘಟನೆಗಳು ಹಾಗೂ ಅಲ್ಪ ಸಂಖ್ಯಾತ ಸಂಘಟನೆಗಳು ಗುರುವಾರ ಭಾರತ್ ಬಂದ್‌ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ 4 ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಪ್ರತಿಪಕ್ಷ ಕಾಂಗ್ರೆಸ್ ಬಂದ್‌ಗೆ ಬೆಂಬಲ ಘೋಷಿಸದೇ ತಟಸ್ಥ ನಿಲುವು ತಳೆದಿದೆ.

ಮಧ್ಯಪ್ರದೇಶ ಬಂದ್ ಕರೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬಹುತೇಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೊರೆನಾ, ಶಿವಪುರಿ, ಭಿಂದ್ ಹಾಗೂ ಅಶೋಕನಗರ್ ಜಿಲ್ಲೆಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.

ಎಸ್‌ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯನ್ವಯ ಯಾರಾದರೂ ತಮ್ಮ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ದೂರು ನೀಡಿದರೆ ಆರೋಪಿಯನ್ನು ಯಾವುದೇ ವಿಚಾರಣೆಯಿಲ್ಲದೆ ಬಂಧಿಸಬಹುದು. ಇದನ್ನು ದುರುಪಯೋಗಪಡಿಸಿಕೊಂಡು ವೈಯಕ್ತಿಕ ಲಾಭಕ್ಕೆ ಬಳಸಿಕೊಳ್ಳುವ ಸಾಧ್ಯತೆಯಿರುವುದರಿಂದ ತಿದ್ದುಪಡಿ ತರಬೇಕೆಂದು ಆಗ್ರಹಿಸಿ ಇಂದು ಬಂದ್‌ಗೆ ಕರೆ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News