ಪುತ್ತೂರು: ಹೊಂಡಕ್ಕೆ ಬಿದ್ದ ಬೈಕ್ ; ಸವಾರ ಮೃತ್ಯು

Update: 2018-09-06 16:05 GMT

ಪುತ್ತೂರು,ಸೆ.6: ಬೈಕ್‍ನಲ್ಲಿ ಸಂಚರಿಸುತ್ತಿದ್ದ ವೇಳೆಯಲ್ಲಿ ರಸ್ತೆಯ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದು ಸವಾರ ಮೃತಪಟ್ಟ ಘಟನೆ ಗುರುವಾರ ಪುತ್ತೂರು ನಗರದ ಕಲ್ಲಾರೆ ಮಠ ಎಂಬಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಕೊಕ್ಕಡ ಹಲ್ಲಿಂಗೇರಿ ನಿವಾಸಿ ಉಮೇಶ್ ಪೂಜಾರಿ(42) ಮೃತಪಟ್ಟವರು. ಅವರು ತನ್ನ ಬೈಕ್‍ನಲ್ಲಿ ಹೋಗುತ್ತಿರುವ ಸಂದರ್ಭದಲ್ಲಿ ಮಠದ ಬಳಿಯಲ್ಲಿ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ರಸ್ತೆ ಬದಿಯ ಆಳವಾದ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆತಂದಿದ್ದು, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News