ಜನಸ್ಪಂದನ ಸಭೆ: 22 ಅರ್ಜಿ ಇತ್ಯರ್ಥ

Update: 2018-09-06 18:02 GMT

ಉಡುಪಿ, ಸೆ.6: ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಸಂಬಂಧಿಸಿದಂತೆ, ಭೂಸ್ವಾಧೀನ ವಿಷಯ, ಪರಿಹಾರ ಪಾವತಿ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಹಾಗೂ ಇತರೆ ದೂರುಗಳ ಹಿನ್ನೆಲೆಯಲ್ಲಿ ಆ.29ರಂದು ಬೈಂದೂರು ತಾಲೂಕಿನ ರೋಟರಿ ಕ್ಲಬ್ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಗಳನ್ನು ಪರಿಶೀಲಿಸಿ ಜನಸ್ಪಂದನ ಸಭೆಯನ್ನು ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಸಾರ್ವಜನಿಕರಿಂದ ಒಟ್ಟು 96 ಅರ್ಜಿಗಳು ಸ್ವೀಕೃತವಾಗಿದ್ದು, ಈ ಪೈಕಿ 22 ಅರ್ಜಿಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಸೂಕ್ತ ಪರಿಹಾರ ಒದಗಿಸಲಾಗಿದೆ. ಬಾಕಿ ಉಳಿದ ಅರ್ಜಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ನಿಗದಿತ ಸಮಯದಲ್ಲಿ ಇತ್ಯರ್ಥ ಪಡಿಸಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News